ನಾನು ದೇವರನ್ನು ನಂಬುತ್ತೇನೆಃಮುಖ್ಯಮಂತ್ರಿ ಸಿದ್ದರಾಮಯ್ಯ

 

ಹೊಸಪೇಟೆ, ನವೆಂಬರ್ 02: ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಅವರು ವಿಶ್ವ ಪಾರಂಪಾರಿಕ ಸ್ಥಳ ಹಂಪಿ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ದೇವರ ದರ್ಶನ ಪಡೆದ ನಂತರ   ಮಾಧ್ಯಮದವರೊಂದಿಗೆ  ಮಾತನಾಡಿದರು.

ಚಾಮರಾಜನಗರಕ್ಕೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು ಎಲ್ಲಾರಿಗೂ ಅವರದ್ದೇ ನಂಬಿಕೆಗಳಿರುತ್ತವೆ. ಸಮಾಜಕ್ಕೆ ಒಳ್ಳೆಯದಾದರೆ ನಂಬೋಣ, ಅನನುಕೂಲವಾದರೆ ನಂಬುವ ಹಾಗಿಲ್ಲ ಎಂದರು.

ಕರ್ನಾಟಕ ಸಂಭ್ರಮ – 50 ಕ್ಕೆ ಚಾಲನೆ ನೀಡಿ  ಇಡೀ ವರ್ಷ ಆಚರಣೆ ಯಾಗಲಿದೆ. ದೇವರಾಜ ಅರಸು ಅವರು 1973 ರಲ್ಲಿ ಮುಖ್ಯಮಂತ್ರಿಗಳಾಗಿದ್ದರು, ನಾನು 2023 ರಲ್ಲಿ ಮುಖ್ಯ ಮಂತ್ರಿಯಾಗಿರುವುದು ಕಾಕತಾಳೀಯ ಎಂದರು.ಅವರೂ ಇಲ್ಲಿಂದಲೇ ಚಾಲನೆ ನೀಡಿದ್ದರು, ನಾನೂ ಇಲ್ಲಿಂದಲೇ ಚಾಲನೆ ನೀಡಿದ್ದೇನೆ ಎಂದರು. 

ದೇವರಾಜ ಅರಸರು ಮೈಸೂರು ರಾಜ್ಯ ಹೆಸರಿಗೆ ಬದಲಾಗಿ ಕರ್ನಾಟಕ ಎಂದು ನಾಮಕರಣ ಮಾಡಿದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷ

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದಾಗಿನಿಂದ ಇಂದಿನವರೆಗೆ ಕನ್ನಡ ನೆಲ-ಜಲ-ಭಾಷೆ-ಸಂಸ್ಕೃತಿ ವಿಚಾರದಲ್ಲಿ ರಾಜಿ ಮಾಡಿಕೊಂಡಿಲ್ಲ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3000 ಕೋಟಿ ರೂ ಹೆಚ್ಚುವರಿ ಅನುದಾನ ನೀಡಿದ್ದೇವೆ ಎಂದರು.

ನನಗೆ ಮೌಢ್ಯದಲ್ಲಿ ನಂಬಿಕೆ ಇಲ್ಲ. ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ ಎಂದು ಸ್ಪಷ್ಟಪಡಿಸಿದರು.ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ “ಕನ್ನಡ ಸಂಭ್ರಮ-50” ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರಣೆ ನೀಡಿದ್ದೆ ಎಂದು ಸ್ಮರಿಸಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಗೌರವ ಉಪಸ್ಥಿತಿ ವಹಿಸಿದ್ದರು

ಮುಖ್ಯ ಅತಿಥಿಗಳಾಗಿ ಹಿರಿಯ ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ.ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ,  ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಗೌರವ ಉಪಸ್ಥಿತಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಹಿರಿಯ ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ.ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ,  ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *