BJP ಭಿನ್ನಮತದ ಪ್ರಯೋಜನ ಪಡೆಯಲು ಕಾಂಗ್ರೆಸ್ ತಂತ್ರ ಹೂಡುವುದೇ ?

BJP  ಬೆಂಗಳೂರು ಮಾರ್ಚ್18(www.kannadadhvani.com )-ರಾಜ್ಯದಲ್ಲಿ ಲೋಕಸಭಾ ಚುನಾವಣೆ (Loksabha Election ) ಗೆಲ್ಲುವ ಹುಮ್ಮನಸ್ಸಿನಲ್ಲಿರುವ  ಭಾರತೀಯ ಜನತಾ ಪಾರ್ಟಿ(BJP) ಆರಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಯಿಂದ ಉಂಟಾದ ಭಿನ್ನಮತದ ಸಮಸ್ಯೆಯನ್ನು ಎದುರಿಸುತ್ತಿದ್ದು, ಅದರ ಲಾಭ ಪಡೆಯುವ ಆಡಳಿತ ಕಾಂಗ್ರೆಸ್  Congress ನಿರಾಸಕ್ತಿ ವಹಿಸಿದೆ.

ಕರಾವಳಿಯಿಂದ ಆರಂಭಗೊಂಡ ಬಿಜೆಪಿ ಪಕ್ಷದೊಳಗಿನ ಭಿನ್ನಮತ ರಾಜ್ಯದ ಇತರೆಡೆ ಹರಡಿದ್ದು, ಮಾಜಿ ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮತ್ತು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಠಿಣ ರಾಜಕೀಯ ನಿರ್ಧಾರಕ್ಕೆ ಮುಂದಾಗಿರುವ ಮಾಹಿತಿ ಇದೆ.

BJP ಬಿಜೆಪಿ ಭಿನ್ನಮತ

ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಆಕಾಂಕ್ಷಿಗಳ ಕೊರತೆ ಇದೆ. ಟಿಕೇಟ್ ಆಕಾಂಕ್ಷಿಗಳು ದೊಡ್ಡ ಸಂಖ್ಯೆಯಲ್ಲೇ ಇದ್ದರು ಕೂಡ ಸೂಕ್ತರು ಅನಿಸಿಕೊಂಡಿರುವ ಬದಲಿ ಅಭ್ಯರ್ಥಿಗಳ ಕೊರತೆ ಕಾಂಗ್ರೆಸ್ ಪಕ್ಷವನ್ನು ಕಾಡುತ್ತಿದೆ.

ಮೈಸೂರು –ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಗೆ ಟಿಕೇಟ್ ತಪ್ಪಿದ ಕೂಡಲೇ ವಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಳಿಸಲು ಮುಂದಾದ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ಅವರು ಅಭ್ಯರ್ಥಿ ಎಂದು ಪಟ್ಟಿಯಲ್ಲಿ ಸೇರಿಸಲಾಯಿತು. ಇದೀಗ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಲು ಸಿದ್ಧರಾಗಿದ್ದು, ಈ ನಿಟ್ಟಿನಲ್ಲಿ ತುರ್ತು ನಿರ್ಧಾರ ಕೈಗೊಳ್ಳಲು ಕಾಂಗ್ರೆಸ್ ರಾಜ್ಯ ನಾಯಕತ್ವ ವಿಫಲವಾಗಿದೆ.

ಡಿವಿ ಸದಾನಂದಗೌಡ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಆದರೆ, ಈ ಬಾರಿ ಅವರಿಗೆ ಟಿಕೆಟ್‌ ನಿರಾಕರಿಸಿರುವ ಬಿಜೆಪಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರದಿಂದ ಟಿಕೆಟ್‌ ನೀಡಿದೆ. ಇದರಿಂದ ಅಸಮಾಧಾನಗೊಂಡಿರುವ ಡಿವಿಎಸ್‌ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಇನ್ನು, ಮೈಸೂರಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರುದ್ಧ ಡಿವಿ ಸದಾನಂದಗೌಡ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ ನಾಯಕರು ಡಿವಿ ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಸಪ್ಷ್ಟ ಚಿತ್ರಣ ದೊರೆಯಬಹುದು.

ಯಡ್ಯೂರಪ್ಪ ಅವರ ವಿರುದ್ಧ ಕೋಪಗೊಂಡಿರುವ ಈಶ್ವರಪ್ಪ ಮತ್ತು ಬಿಜೆಪಿ ಹೈಕಮಾಂಡ್ ನಡುವಣ ರಾಜಿ ಸಂಧಾನ ಮುರಿದುಬಿದ್ದಿದೆ.

ಬೆಂಗಳೂರಿನ ಈಶ್ವರಪ್ಪ ಮನೆಯಿಂದ ಹೊರ ಬಂದ ನಂತರ ಮಾಧ್ಯಮಗಳ ಬಳಿ ಮಾತನಾಡಿದ ಬಿಜೆಪಿ ಮುಖಂಡ ರಾಧಾ ಮೋಹನ್‌ ಅಗರ್ ವಾಲ್ ನಾವು ಆತ್ಮೀಯ ಸ್ನೇಹಿತರು ಇದೊಂದು ವೈಯಕ್ತಿಕ ಭೇಟಿ ಅಷ್ಟೆ ರಾಜಕೀಯದ ವಿಚಾರ ಚರ್ಚಿಸಿಲ್ಲ ಎಂದು ಹೇಳುವ ಮೂಲಕ ಮಾತುಕತೆ ವಿಫಲ ಆಗಿದೆಯೆಂದೇ ಅರ್ಥ.

ಇದರ ಜೊತೆಗೆ ಈಶ್ವರಪ್ಪ ಸ್ಪರ್ಧೆ ಬಗ್ಗೆ ಅವರ ಕುಟುಂಬದವರ ಬಳಿ ಮಾತನಾಡಿದ್ದೇನೆ ಎಲ್ಲಾ ಸರಿ ಹೋಗುತ್ತೆ ಎಂಬ ವಿಶ್ವಾಸವಿದೆ.

ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಈಶ್ವರಪ್ಪ ಮುಂದಾಗಿದ್ದಾರೆ.

ಶಿವಮೊಗ್ಗದಲ್ಲಿ  ಕಾಂಗ್ರೆಸ್ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಯಡ್ಯೂರಪ್ಪ ಮಗ ಬಿ.ವೈ.ರಾಘವೇಂದ್ರ ಗೆಲುವು ನಿಶ್ಚಿತ ಆಗಿತ್ತು. ಇದೇ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಇನ್ನೇನು ಗೆದ್ದೇಬಿಡುವೆನೆಂದು ಬೀಗುತ್ತಿದ್ದ ಯಡಿಯೂರಪ್ಪ ಕುಟುಂಬಕ್ಕೆ ಈಗ ಕೆ.ಎಸ್.ಈಶ್ವರಪ್ಪ ಕಬ್ಬಿಣದ ಕಡಲೆಯಂತಾಗಿದ್ದಾರೆ.

ಬಿ.ವೈ.ರಾಘವೇಂದ್ರ ನಾಲ್ಕನೇ ಅವಧಿಯ ಸಂಸತ್ತಿನ ಪಯಣಕ್ಕೆ ಈಶ್ವರಪ್ಪ ಸ್ಪಷ್ಟ ಅಡ್ಡಲಾಗಿ ನಿಂತಿದ್ದಾರೆ. ಇಬ್ಬರ ಜಗಳದ ನಡುವೆ ಕಾಂಗ್ರೆಸ್ ಪಕ್ಷದ ಗೀತಾ ಶಿವರಾಜಕುಮಾರ್ ತಣ್ಣಗೆ ತನ್ನ ಪಕ್ಷದ್ದೇ ಮತ ಪಡೆದು ಮೇಲೆ ಬಂದರೂ ಗೆಲುವು ನಿಶ್ಚಿತ ಎಂಬ ವಾತಾವರಣ ಶಿವಮೊಗ್ಗದಲ್ಲಿ ಸೃಷ್ಟಿಯಾಗಿದೆ.

ಹಾವೇರಿ ಕ್ಷೇತ್ರದ ಟಿಕೆಟ್‌ ಅನ್ನು ಪುತ್ರ ಕಾಂತೇಶ್‌ ಅವರಿಗೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಬಹಿರಂಗವಾಗಿಯೇ ಒತ್ತಾಯಿಸಿದ್ದರು. ಕಾಂತೇಶ್‌ ಪರವಾಗಿ ಲಾಬಿ ಮಾಡುವುದಾಗಿ ಬಿಎಸ್‌ ಯಡಿಯೂರಪ್ಪ ಕೂಡ ಹೇಳಿದ್ದರು. ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ಸ್ಪರ್ಧೆ ನಡೆಸುತ್ತಿದ್ದಾರೆ.

ಕಾಂಗ್ರೆಸ್​ ಮುಖಂಡರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸುತ್ತಿದ್ದು, ಟಿಕೆಟ್​ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ. ಬೇರೆ ಬೇರೆ ಸಂಗತಿಗಳು ನಡೀತಿವೆ ಎಂದು ಡಿವಿ ಸದಾನಂದಗೌಡ ಹೇಳಿದರು.

ಭಾನುವಾರ ಮಾ.17 ರಂದು ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು, ಸಾಂತ್ವನ ಮಾಡಿರುವುದು ನಿಜ. ಮುಂದಿನ ನಿರ್ಧಾರ ನನ್ನ ಕುಟುಂಬಸ್ಥರ ಜತೆ ಚರ್ಚಿಸಬೇಕು. ದೆಹಲಿಯಲ್ಲಿ, ರಾಜ್ಯದಲ್ಲಿ ಒಂದಷ್ಟು ವಿದ್ಯಮಾನ ನಡೆದಿವೆ. ನಿಮಗೆ ಟಿಕೆಟ್ ಅಂದರು, ಕೊನೆ ಕ್ಷಣದಲ್ಲಿ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರವನ್ನ ಹೇಳಿಕೊಳ್ಳಬೇಕಿದೆ. ಇವತ್ತು ನನ್ನ ಜನ್ಮದಿನ, ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆದು ನಂತರ ನಿಶ್ಚಯ ಮಾಡುತ್ತೇನೆ. ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ನನ್ನ ನಿರ್ಣಯ ಬಗ್ಗೆ ನಾಳೆ ಸುದ್ದಿಗೋಷ್ಠಿ ಕರೆದು ತಿಳಿಸುತ್ತೇನೆ ಎಂದು  ಸದಾನಂದಗೌಡ ಹೇಳಿದರು.

ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ ತಿಳಿದು ತಿಳಿದು ಹೀಗೆ ಮಾಡಿರುವುದು ಬೇಜಾರು ತಂದಿದೆ. ಬಿ.ವೈ.ರಾಘವೇಂದ್ರ ವಿರುದ್ಧ ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕೆ.ಎಸ್.ಈಶ್ವರಪ್ಪ ನಿರ್ಧರಿಸಿರುವ ಕುರಿತು ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಭೇಟಿಯಾಗಿ ಮಾತನಾಡಿದ್ದೇನೆ. ಪಕ್ಷದಲ್ಲಿ ಯಾರಿಗೆಲ್ಲಾ ಮನಸ್ಸಿಗೆ ನೋವಾಗಿದೆಯೋ, ಒಟ್ಟಿಗೆ ಹೋಗಿ ವರಿಷ್ಠರ ಭೇಟಿಯಾಗಿ ತೀರ್ಮಾನಿಸೋಣ ಅಂದಿದ್ದೆ. ಆದರೆ ಈಶ್ವರಪ್ಪ ತಮ್ಮದೇ ಆದ ನಿರ್ಣಯ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದರು.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕೂಡ ಮಾಜಿ ಸಚಿವರಾದ ವಿ.ಸೋಮಣ್ಣ ಮತ್ತು ಮಾಧುಸ್ವಾಮಿ ನಡುವೆ ತಿಕ್ಕಾಟ ಮುಂದುವರಿದಿದ್ದು, ಮಾಧುಸ್ವಾಮಿ ಕೂಡ ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗುತ್ತಿದೆ.

ಎರಡು ಗುಪ್ತಚರ ಇಲಾಖೆ, ಖಾಸಗಿ ಅಧ್ಯಯನ ಸಂಸ್ಥೆಗಳು ಮತ್ತು ಮಾಧ್ಯಮ ಸಂಸ್ಥೆಗಳು ನಡೆಸಿರುವ ಚುನಾವಣಾ ಸಮೀಕ್ಷೆಗೆ ರಾಜ್ಯದಲ್ಲಿ ಬಿಜೆಪಿ ಮೇಲುಗೈ ಪಡೆಯುವ ಸೂಚನೆ ದೊರೆತಿದೆ. ಬಿಜೆಪಿ 25ಕ್ಕು ಹೆಚ್ಚು ಸೀಟುಗಳನ್ನು ಗೆಲ್ಲುವ ಸಾಧ್ಯತೆ ಇದೆ. ಎರಡು ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದಾಗ ಸೀಟುಗಳ ಲೆಕ್ಕದಲ್ಲಿ ಹೆಚ್ಚುಕಡಿಮೆ ಆಗಬಹುದು.

ಲೋಕಸಭಾ ಚುನಾವಣೆ 2024

ಸಾರ್ವತ್ರಿಕ ಚುನಾವಣೆ ಅಥವಾ ಲೋಕಸಭೆ ಚುನಾವಣೆ ಪ್ರತಿ ಐದು ವರ್ಷಕ್ಕೆ ಒಮ್ಮೆ ಜರುಗುವ ವಿದ್ಯಮಾನ. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಎರಡನೇ ಅವಧಿ ಅಂದರೆ ದೇಶದ 17ನೇ ಲೋಕಸಭೆಯ ಅವಧಿ 2024ರ ಜೂನ್ 16ರಂದು ಮುಕ್ತಾಯಗೊಳ್ಳುತ್ತಿದೆ. ಅದಕ್ಕೂ ಮುನ್ನವೇ 18ನೇ ಲೋಕಸಭೆ ಚುನಾವಣೆ ನಡೆದು ಹೊಸ ಸರ್ಕಾರ ಚುನಾಯಿತವಾಗಬೇಕಿದೆ.

ಪ್ರತಿ ಐದು ವರ್ಷಗಳಿಗೆ ಒಮ್ಮೆ ಲೋಕಸಭೆಗೆ ಚುನಾವಣೆ ನಡೆಯಬೇಕು ಎಂದು ಸಂವಿಧಾನದ 83ನೇ ವಿಧಿ ಹೇಳುತ್ತದೆ. ಈ ಚುನಾವಣೆಯಲ್ಲಿ ನೋಂದಾಯಿತ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಅಧಿಕೃತವಾಗಿ ಹೆಸರಿಸಿ ಕಣಕ್ಕೆ ಇಳಿಸುತ್ತವೆ. ಜನರು ಕೂಡ ಪಕ್ಷೇತರರಾಗಿ ಸ್ಪರ್ಧಿಸಲು ಅವಕಾಶ ಇರುತ್ತದೆ. ಲೋಕಸಭೆಯಲ್ಲಿ ಒಟ್ಟು 543 ಸ್ಥಾನಗಳಿವೆ. ಇವರೆಲ್ಲರೂ ಜನರು ಚಲಾಯಿಸುವ ಮತಗಳಿಂದ ಚುನಾಯಿತರಾಗುವವರು. ದೇಶದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆ ಸ್ಥಾನಗಳಿರುತ್ತವೆ.

ಇದರ ಜತೆಗೆ ಆಂಗ್ಲೋ ಇಂಡಿಯನ್ ಸಮುದಾಯಕ್ಕೆ ಎರಡು ಸ್ಥಾನಗಳು ಮೀಸಲಿರುತ್ತವೆ. ಲೋಕಸಭೆಯಲ್ಲಿ ಅಧಿಕಾರಕ್ಕೆ ಬರಲು ಒಂದು ಪಕ್ಷ ಅಥವಾ ವಿವಿಧ ಪಕ್ಷಗಳನ್ನು ಒಳಗೊಂಡ ಮೈತ್ರಿಕೂಟವು 272 ಸೀಟುಗಳ ಗಡಿಯನ್ನು ದಾಟಬೇಕು. ಕೇಂದ್ರ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಗೆ ಸಂಬಂಧಿಸಿದ ದಿನಾಂಕಗಳನ್ನು ಮತ್ತು ನಿಯಮಾವಳಿಗಳನ್ನು ಪ್ರಕಟಿಸುತ್ತದೆ. 18 ವರ್ಷ ದಾಟಿದ ಭಾರತೀಯ ನಾಗರಿಕರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತ ಚಲಾಯಿಸುವ ಅಧಿಕಾರ ಹೊಂದಿರುತ್ತಾರೆ. ಆಯೋಗವು ತನ್ನ ಅನುಕೂಲತೆ ಹಾಗೂ ಸಿಬ್ಬಂದಿಗಳ ಲಭ್ಯತೆ, ಭದ್ರತೆ ಮುಂತಾದವುಗಳನ್ನು ಗಮನದಲ್ಲಿ ಇರಿಸಿಕೊಂಡು ವಿವಿಧ ಹಂತಗಳಲ್ಲಿ ಚುನಾವಣೆ ನಡೆಸುತ್ತದೆ.

ಚುನಾವಣಾ ಬಾಂಡ್ ಖರೀದಿಸಿದ ಮೇಘಾ ಇಂಜಿನಿಯರಿಂಗ್ ಕಂಪೆನಿಗೆ ಸಾವಿರ ಕೋಟಿ ರೂ. ಲಾಭ

 

Leave a Reply

Your email address will not be published. Required fields are marked *