BJP Sankalpa ಸಂಕಲ್ಪ ಪತ್ರ ಬಿಡುಗಡೆ

BJP Sankalpa ಮಂಗಳೂರು (www.kannadadhvani.com): ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವತಿಯಿಂದ ನಿಮ್ಮ ಸಲಹೆ, ನಮ್ಮ ಸಂಕಲ್ಪ ದ ಸಂಕಲ್ಪ ಪತ್ರ ಬಿಡುಗಡೆ ಇಂದು ಮಾ.15ರಂದು ಮಂಗಳೂರಿನಲ್ಲಿ ನಡೆಯಿತು.

ಲೋಕಸಭಾ ಚುನಾವಣೆಯ  ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಚಿಂತನೆಯಂತೆ ಪ್ರಣಾಳಿಕೆ ಬದಲು ಜನಾಭಿಪ್ರಾಯ ಪಡೆದು ಸಂಕಲ್ಪ ಪತ್ರದ ಮೂಲಕ ಚುನಾವಣೆ ಎದುರಿಸಲಾಗುತ್ತಿದೆ.

ಬಿಜೆಪಿಪಕ್ಷದ ಸಂಕಲ್ಪ ಪತ್ರಕ್ಕಾಗಿ ರಾಜ್ಯದ ಕನಿಷ್ಠ 3 ಲಕ್ಷ ಜನರ ಅಭಿಪ್ರಾಯ ಸಂಗ್ರಹದ ಗುರಿ ಇದೆ. ದೇಶದಲ್ಲಿ 1 ಕೋಟಿ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿ ಇರಿಸಲಾಗಿದೆ.

ನೀವು BJP Sankalpa ಸಂಕಲ್ಪ ಪತ್ರಕ್ಕೆ ಸಲಹೆ ನೀಡಿ

ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಲಹಾ ಪೆಟ್ಟಿಗೆ ಇಡಲಾಗುತ್ತದೆ. ಮಿಸ್ಡ್ ಕಾಲ್ ನೀಡುವುದರ ಮೂಲಕ ಕೂಡ ಪಾಲ್ಗೊಳ್ಳಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ :  909090-2124 ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಶಾಂತಾರಾಮ ಶೆಟ್ಟಿ, ಮಂಗಳೂರು ಲೋಕಸಭಾ ಚುನಾವಣ ಅಭ್ಯರ್ಥಿ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಮೇಯರ್, ಸುಧೀರ್ ಶೆಟ್ಟಿ ಕಣ್ಣೂರು, ಮುಖಂಡರಾದ ನಿತಿನ್ ಕುಮಾರ್, ಸಂಜಯ್ ಪ್ರಭು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *