Rape: 8 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನಿಂದ ಅತ್ಯಾಚಾರ

ಲಕ್ನೋ ಸೆ.29:  ಉತ್ತರ ಪ್ರದೇಶ ರಾಜ್ಯದ ಲಕ್ನೋ ಮಹಾನಗರದ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಒಂಬತ್ತು ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ಪ್ರಕರಣ ದಾಖಲು ಮಾಡಲಾಗಿದ್ದು, ಅಪ್ರಾಪ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಮುಂದಿನ ಕ್ರಮವನ್ನು ನಿರ್ಧರಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಜೊತೆ ಚರ್ಚೆ ಮಾಡಲಾಗುತ್ತಿದೆ’ ಎಂದು ಪೊಲೀಸ್ ಠಾಣಾಧಿಕಾರಿ ಅತುಲ್ ಕುಮಾರ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.

ಸಂಜಯ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ಕಾಲೇಜನ ಸಮೀಪ ಅರ್ಜುನ್‌ಗಂಜ್‌ನ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಹುಡುಗಿ ಭಿಕ್ಷೆ ಬೇಡುವ ಕೆಲಸ ಮಾಡುತ್ತಿದ್ದರೆ, ಹುಡುಗನು ಸುಶಾಂತ್ ಗಾಲ್ಫ್ ಸಿಟಿ ಪ್ರದೇಶದ ಬಳಿ ವಾಸ ಮಾಡುತ್ತಿದ್ದಾನೆ. ಅದಲ್ಲದೆ, ಬೀದಿಗಳಲ್ಲಿ ಬಲೂನ್‌ಗಳನ್ನು ಮಾರಿ ಜೀವನ ಸಾಗಿಸುತ್ತಿದ್ದಾನೆ. ಇಬ್ಬರೂ ಪರಸ್ಪರ ಪರಿಚಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಆ ಪ್ರದೇಶದಲ್ಲಿ ಆಯೋಜಿಸಿದ್ದ ಜಾತ್ರೆಗೆ ಇಬ್ಬರು ಬಂದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾತ್ರೆ ಮುಗಿದ ನಂತರ, ಅಪ್ರಾಪ್ತ ವಯಸ್ಸಿನಹುಡುಗನು ಅಪ್ರಾಪ್ತ ಬಾಲಕಿಯನ್ನು ಏಕಾನಾ ಕ್ರೀಡಾಂಗಣದ ಹಿಂಭಾಗದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮರುದಿನ ಹುಡುಗಿ ಈ ವಿಚಾರವನ್ನು ತನ್ನ ತಂದೆಗೆ ತಿಳಿಸಿದ್ದು, ನಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಘಟನೆಯ ನಂತರ ಆರೋಪಿ ಬಾಲಕ ಪರಾರಿ ಆಗಿದ್ದಾನೆ. ಆದರೆ, ಆತನ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಡಿಯನ್ ಪೀನಲ್ ಕೋಡ್ IPC 88ರ ಪ್ರಕಾರ 7- 12 ಪ್ರಾಯದ ಮಕ್ಕಳು ಅಪರಾಧ ಕೃತ್ಯ ಎಸಗಿದಾಗ ಇತರ ಆರೋಪಿಗಳಂತೆ ವಿಚಾರಣೆ ನಡೆಸಿ ಶಿಕ್ಷೆ ನೀಡದೆ ಅವರನ್ನು ಸರಿದಾರಿಗೆ ತರುವ ವ್ಯವಸ್ಥೆ ಮಾಡಲು ಅವಕಾಶ ಇರುತ್ತದೆ.

Leave a Reply

Your email address will not be published. Required fields are marked *