BSP Karnataka ದಕ್ಷಿಣ ಕನ್ನಡ ಲೋಕಸಭಾ ಕಾಂತಪ್ಪ ಆಲಂಗಾರು ಸ್ಪರ್ಧೆ

ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಹನ್ನೊಂದು ಮಂದಿ ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಒಬ್ಬರ ನಾಮಪತ್ರ ತಿರಸ್ಕೃತವಾಗಿದೆ. ಮಂಗಳೂರುಮಾರ್ಚ್ 5:(www.kannadadhvani.com) ದಕ್ಷಿಣ ಕನ್ನಡ(Mangalore) ೋಕಸಭಾ ಚುನಾವಣೆಗೆ Loksabha ಸ್ಪರ್ಧಿಸಲು ಹನ್ನೊಂದು ಮಂದಿ ನಾಮಪತ್ರ Nomination ಸಲ್ಲಿಸಿದ್ದು, ಇದರಲ್ಲಿ ಒಬ್ಬರ ನಾಮಪತ್ರ ತಿರಸ್ಕವಾಗಿದೆ.

ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷ (ಬಿ ಎಸ್ ಪಿ) ದ ಅಭ್ಯರ್ಥಿಯಾಗಿ ಬಿ ಎಸ್ ಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಅವರ ನಾಮಪತ್ರ ಕ್ರಮಬದ್ಧವಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಮುಲ್ಲಯ್ ಮುಹಿಲನ್ ಎಂ ಪಿ ನೇತೃತ್ವದಲ್ಲಿ ನಾಮಪತ್ರ ಪರಿಶೀಲನೆ ನಡೆಸಲಾಗಿದ್ದು, ನಾಮಪತ್ರ ಕ್ರಮಬದ್ಧ ವಾಗಿದೆ ಎಂದು ಪ್ರಕಟಿಸ ಲಾಗಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು 11 ಮಂದಿ ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಬಹುಜನ ಸಮಾಜ ಅಭ್ಯರ್ಥಿ ಕಾಂತಪ್ಪ ಆಲಂಗಾರ್ ಸಹಿತ ಹತ್ತು ಮಂದಿಯ ನಾಮಪತ್ರ ಕ್ರಮಬದ್ಧವಾಗಿದೆ.

ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಹನ್ನೊಂದು ಮಂದಿ ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಒಬ್ಬರ ನಾಮಪತ್ರ ತಿರಸ್ಕೃತವಾಗಿದೆ. ಇನ್ನುಳಿದ 10 ಮಂದಿಯ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ಮುಗಿಲನ್ ಪ್ರಕಟಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ದೀಪಕ್ ರಾಜೇಶ್ ಕುಯೆಲ್ಲೋ ಎಂಬವರು ಮೂರು ಸೆಟ್ ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಒಂದು ನಾಮಪತ್ರ ತಿರಸ್ಕೃತವಾಗಿದೆ. ಉಳಿದ 2 ನಾಮಪತ್ರ ಕ್ರಮಬದ್ಧವಾಗಿದೆ. ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಫ್ರಾನ್ಸಿಸ್ ಲ್ಯಾನ್ಸಿ ಮಾಡ್ತಾ ಅವರ ನಾಮಪತ್ರ ತಿರಸ್ಕೃತವಾಗಿದ್ದು, ಚುನಾವಣಾ ಕಣದಿಂದ ಹೊರಗುಳಿದಿದ್ದಾರೆ.
ಕ್ಷೇತ್ರದಿಂದ ಸ್ಪರ್ಧಿಸಲು 11 ಅಭ್ಯರ್ಥಿಗಳು 21 ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ತಲಾ 4 ಸೆಟ್ ನಾಮಪತ್ರ ಸಲ್ಲಿಸಿದ್ದು, ಇವೆಲ್ಲವೂ ಕ್ರಮಬದ್ಧವಾಗಿದೆ. ಇನ್ನುಳಿದಂತೆ ಬಿಎಸ್​ಪಿಯ ಕಾಂತಪ್ಪ, ಜನಹಿತಪಕ್ಷ ಮತ್ತು ಜನತಾದಳ (ಯು) ನಿಂದ ನಾಮಪತ್ರ ಸಲ್ಲಿಸಿದ್ದ ಸುಪ್ರೀತ್ ಕುಮಾರ್ ಪೂಜಾರಿ, ಉತ್ತಮ ಪ್ರಜಾಕೀಯ ಪಾರ್ಟಿಯ ಕೆ.ಇ.ಮನೋಹರ, ಕೆ.ಆರ್. ಎಸ್‌ನ ರಂಜಿನಿ, ಕರುನಾಡು ಸೇವಕರ ಪಾರ್ಟಿಯ ದುರ್ಗಾಪ್ರಸಾದ್ , ಪಕ್ಷೇತರ ಆಗಿ ನಾಮಪತ್ರ ಸಲ್ಲಿಸಿದ್ದ ಸತೀಶ್ ಬಿ, ಮ್ಯಾಕ್ಷಿಂ ಪಿಂಟೋ ಅವರ ನಾಮಪತ್ರ ಕ್ರಮಬದ್ದವಾಗಿದೆ. ಒಟ್ಟಾರೆ 10 ಅಭ್ಯರ್ಥಿಗಳ 19 ನಾಮಪತ್ರಗಳು ಕ್ರಮಬದ್ದವಾಗಿದೆ.

ಇದನ್ನು ಓದಿ:

Leave a Reply

Your email address will not be published. Required fields are marked *