Caste Census: ಜಾತಿ ಸಮೀಕ್ಷೆ ವರದಿಗೆ ಶಾಸಕ ಸುನೀಲ್ ಕುಮಾರ್ ವಿರೋಧ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) caste Census ವರದಿಯನ್ನು ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ (Sunil Kumar)  ಅವರು ವಿರೋಧಿಸಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರದ ವಿಚಾರದಲ್ಲಿ ನೀವು ದಿನಕ್ಕೊಂದು ನಿಲುವು ತಾಳುವುದನ್ನು ನಿಲ್ಲಿಸಿ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ (CM Siddaramaiah), ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಸ್ವೀಕಾರದ ವಿಚಾರದಲ್ಲಿ ನೀವು ದಿನಕ್ಕೊಂದು ನಿಲುವು ತಾಳುವುದನ್ನು ನಿಲ್ಲಿಸಿ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಕಾರ್ಕಳ (Sunil Kumar Karkala) ವಾಗ್ದಾಳಿ ನಡೆಸಿದ್ದಾರೆ.

“ವರದಿ ಸ್ವೀಕರಿಸುವ ವಿಚಾರದಲ್ಲಿ ನನ್ನ ನಿಲುವು ಅಚಲ” ಎಂದು ಪ್ರತಿಪಾದಿಸುತ್ತಲೇ ನೀವು ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಜಾತಿ ಗಣತಿ ವರದಿಯನ್ನು (Caste Census) ಕೇವಲ ರಾಜಕೀಯ ಅಸ್ತ್ರವಾಗಿಸಿಕೊಂಡು ದಿನದೂಡುವ ಬದಲು ಸಾರ್ವಜನಿಕವಾಗಿ ಇದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯುವುದಕ್ಕಾದರೂ ಸರ್ಕಾರ ವೇದಿಕೆ ಸೃಷ್ಟಿಸಲಿ. ವರದಿಯ ವೈಜ್ಞಾನಿಕತೆಯ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಇದನ್ನು ಓದಿ-ವಂದಿತಾ ಶರ್ಮಾ ನಿವೃತ್ತಿ ರಜನೀಶ್ ಗೋಯಲ್ ಹೊಸ ಸಿಎಸ್

ರಾಹುಲ್ ಗಾಂಧಿಯವರ ಹೇಳಿಕೆಯ‌ನ್ನು ಗುರಾಣಿಯಾಗಿಸಿಕೊಂಡು ನೀವು ಸ್ವಪಕ್ಷೀಯರ ವಿರೋಧವನ್ನು ತಪ್ಪಿಸಿಕೊಳ್ಳಲು ಹವಣಿಸುತ್ತಿರಬಹುದು. ಆದರೆ ಹಿಂದುಳಿದ ವರ್ಗ ಹಾಗೂ ಸಮಾಜದಲ್ಲಿ ಅನಪೇಕ್ಷಿತ ಗೊಂದಲ ಹಾಗೂ ಅನುಮಾನವನ್ನು ಸೃಷ್ಟಿಸಬೇಡಿ ಎಂದಿದ್ದಾರೆ.

ಜಾತಿಗಣತಿ ಪ್ರತಿ ಕಾಣೆ ಆಗಿಲ್ಲ ಜಯಪ್ರಕಾಶ್ ಹೆಗ್ಡೆ ಸ್ಪಷ್ಟನೆ

ಜಾತಿ ಗಣತಿಯ ಮಾಹಿತಿ ಸೇಫ್ ಆಗಿದೆ. ಡೆಟಾ ಎಲ್ಲವೂ ಇದೆ‌ ಯಾವುದು ಮಿಸ್ ಅಗಿಲ್ಲ. ಅದು ಪ್ರತಿ ಜಿಲ್ಲಾಧಿಕಾರಿಗಳ ಬಳಿಯೂ ಜಾತಿಗಣತಿಯ ಮಾಹಿತಿ ಇರುತ್ತದೆ. ಆದ್ರೆ ಹಿಂದೆ ಸಿದ್ಧಪಡಿಸಿದ್ದ ಮೂಲ ಪ್ರತಿ ಇಲ್ಲ.  ನಾನು ಡೇಟಾ ಆಧರಿಸಿಯೇ ವರದಿ ಸಿದ್ಧಪಡಿಸುತ್ತೇವೆ ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ನವೆಂಬರ್ 24ರಂದು ಸರಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎನ್ನುವುದರ ಹಿನ್ನೆಲೆಯಲ್ಲಿ ಕಾಂತರಾಜ್ ಅಧ್ಯಕ್ಷತೆಯಲ್ಲಿ ಸಿದ್ಧಪಡಿಸಲಾಗಿದ್ದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿಯ ಮೂಲ ಪ್ರತಿಯೇ ನಾಪತ್ತೆಯಾಗಿದೆ ಅಥವಾ ಕಳುವಾಗಿದೆ ಎಂಬ ಸುದ್ದಿಯು ಹರಡಿತ್ತು.

ಗುರುವಾರ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾಗಿರುವ ಜಯಪ್ರಕಾಶ್ ಹಗ್ಡೆ ಅವರ ಅವಧಿ ಮುಕ್ತಾಯವಾಗಲಿದ್ದು, ಇಂದು ಮಾಧ್ಯಮದೊಂದಿಗೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ ಅವರು, ಕೆಲಸ ಮಾಡೋಕೆ ಮೂರು ತಿಂಗಳಲ್ಲ, ಆರು ತಿಂಗಳು ಕೊಟ್ಟರೂ ಖುಷಿ ಇದೆ. ಸರ್ಕಾರ ಏನು ತೀರ್ಮಾನ ಮಾಡುತ್ತೆ ನೋಡೋಣ ಎಂದು ಹೇಳಿದ್ದಾರೆ.

ಜಾತಿ‌ ಜನಗಣತಿ ವರದಿಗೆ ಒಕ್ಕಲಿಗ ಸಮುದಾಯ ವಿರೋಧ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಶಾಸಕ‌ ಡಾ.ಸಿ‌ಎನ್.ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

ಜಾತಿ ಗಣತಿ ವರದಿಗೆ ಡಿಕೆ ಶಿವಕುಮಾರ್  ವಿರೋಧ

ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿಗೆ ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದು, ಕಾಂತರಾಜ್ ಆಯೋಗದ ವರದಿ ತಿರಸ್ಕರಿಸಲು ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ ಪತ್ರಕ್ಕೆ ಡಿಸಿಎಂ ಸಹಿ ಹಾಕಿದ್ದಾರೆ.

ಈ ಮೂಲಕ ಎಚ್‌. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಹ ಅಧಿಕೃತವಾಗಿ ವಿರೋಧ ವ್ಯಕ್ತಪಡಿಸಿದಂತೆ ಆಗಿದೆ.

ಸಮುದಾಯದಲ್ಲಿ ಗೊಂದಲ ಮೂಡಿಸಿದ ಈಡಿಗ ಸಮಾವೇಶಗಳು

ಕಾಂತರಾಜು ಆಯೋಗದ ವರದಿ ತಿರಸ್ಕರಿಸುವ ಸಂಬಂಧ ಒಕ್ಕಲಿಗರ ಸಂಘ ಮನವಿ ಪತ್ರವನ್ನು ಸಿದ್ಧಪಡಿಸಿತ್ತು. ಇದಕ್ಕೆ ಈಗ ಡಿ.ಕೆ. ಶಿವಕುಮಾರ್‌ ಅವರ ಸಹಿಯನ್ನು ಪಡೆದುಕೊಳ್ಳಲಾಗಿದ್ದು, ಆ ಪತ್ರವನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಲಾಗಿದೆ. ಇದರ ಮನವಿ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಲ್ಲಿಸಲಾಗಿದೆ.

ಈ ಮನವಿ ಪತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ, ಎಚ್ ಡಿ ಕುಮಾರಸ್ವಾಮಿ, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಒಕ್ಕಲಿಗ ಸಮುದಾಯದ ಹಲವು ಶಾಸಕರು ಸಹಿ ಹಾಕಿದ್ದಾರೆ.

ಜಾತಿ‌ ಜನಗಣತಿ ವರದಿ ರಾಜಕೀಯ ಪ್ರೇರಿತವಾಗಿದೆ. ಅದನ್ನು ಸರ್ಕಾರ ಸದುದ್ದೇಶದಿಂದ ಪಡೆಯುತ್ತಿಲ್ಲ. ವರದಿ ಅವೈಜ್ಞಾನಿಕವಾಗಿದೆ. ಜಾತಿ ಜನಗಣತಿಗೆ ನಮ್ಮ ಸಂಪೂರ್ಣ ವಿರೋಧ ಇದೆ. ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣ ಮಾಡ್ತಿದ್ದಾರೆಂದು ಅಶ್ವಥ್ ನಾರಾಯಣ ಹೇಳಿದ್ದಾರೆ.

ಜಾತಿ ಗಣತಿ ವರದಿ ಸ್ವೀಕರಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳನಲ್ಲಿ ಸಲ್ಲಿಸಲಿದ್ದು, ಆಯೋಗದ ಸಲ್ಲಿಸಿದ ವರದಿಯನ್ನು ಸ್ವೀಕರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಭರವಸೆ ನೀಡಿದರು,
ಹಿಂದಿನ ಬಾರಿ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಇಡೀ ದೇಶದಲ್ಲಿ ಜಾತಿ ಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿವಾರು ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಲಿಲ್ಲ’ ಎಂದು ತಿಳಿಸಿದರು

Leave a Reply

Your email address will not be published. Required fields are marked *