Chaitra Bail: ಚೈತ್ರಾಗೆ ಜಾಮೀನು ಮಂಜೂರು

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಬಾಡಿಗೆ ಭಾಷಣಕಾರ್ತಿ ಚೈತ್ರಾ(Chaitra KUndapura) ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು (Chaitra Bail) ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿ ಚೈತ್ರಾ ಅವರನ್ನು ಬಂಧಿಸಲಾಗಿತ್ತು. ಟಿಕೆಟ್‌ಗಾಗಿ ಬರೋಬ್ಬರಿ 5 ಕೋಟಿ ರೂ. ಪಡೆದಿದ್ದರು ಎಂದು ಗೋವಿಂದಬಾಬು ಪೂಜಾರಿ ದೂರು ನೀಡಿದ್ದರು. ಈ ಬಗ್ಗೆ ಸಿಸಿಬಿ ಪೊಲೀಸರು ದೂರು ದಾಖಲಿಸಿಕೊಂಡು ಕಳೆದ ಎರಡು ತಿಂಗಳ ಹಿಂದೆ ವಶಕ್ಕೆ ಪಡೆದಿದ್ದರು.

ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ.

Bharat Jodo Yatra: ಡಿಸಂಬರಿನಲ್ಲಿ 2 ನೇ ಹಂತದ ಭಾರತ್​ ಜೋಡೋ ಯಾತ್ರೆ

Leave a Reply

Your email address will not be published. Required fields are marked *