compensation for rape victim ; ಸಂತ್ರಸ್ತ ಮಹಿಳೆಗೆ ಸರ್ಕಾರ 2 ಎಕರೆ ಜಮೀನು ಹಾಗೂ 5 ಲಕ್ಷ ರೂ. ಪರಿಹಾರ

compensation for rape victim

compensation for rape victim  ಬೆಳಗಾವಿ: ದೌರ್ಜನ್ಯಕ್ಕೆ ಒಳಗಾದ ಹೊಸ ವಂಟಮೂರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಸರ್ಕಾರ 2 ಎಕರೆ ಜಮೀನು ಹಾಗೂ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಜಿಲ್ಲಾಉಸ್ತುವಾರಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ನೀಡಿರುವ ಅವರು, ನೊಂದ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ನಿಧಿಯಿಂದ 5 ಲಕ್ಷ ರೂ ನೆರವು ನಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

compensation for rape victim ಪರಿಹಾರ ಧನ ನೀಡಲು ಕ್ರಮ

”ಸಂತ್ರಸ್ತೆಗೆ ನೆರವು ನೀಡುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಗತ್ಯ ಸೌಲಭ್ಯ ಒದಗಿಸಿಕೊಟ್ಟು, ನ್ಯಾಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಮಹಿಳೆಗೆ ಇಲಾಖೆಯಿಂದ ಪರಿಹಾರ ಧನ ನೀಡಲು ಕ್ರಮ ವಹಿಸಬೇಕು,” ಎಂದು ಜಿಲ್ಲಾಧಿಕಾರಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಸೂಚಿಸಿದ್ದಾರೆ.

ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು. ಹೀಗಿದ್ದರೂ ಒಂದು‌ ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ. ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ‌ ಸಮಾಜ ಖಂಡಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹೈಕೋರ್ಟ್‌ ಆಕ್ರೋಶ

ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆ ಮಾಡಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಪೊಲೀಸರ ವಿರುದ್ಧ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿದೆ. ಇಂದಿನ ಆಧುನಿಕ ಯುಗದಲ್ಲಿ ದುಶ್ಯಾಸನರೇ ತುಂಬಿದ್ದಾರೆ. ಯಾವ ಕೃಷ್ಣನೂ ಆಕೆಯ ನೆರವಿಗೆ ಬರಲಿಲ್ಲ ಎಂದು ಹೈಕೋರ್ಟ್‌ ನ್ಯಾಯಪೀಠ ಅಸಮಾಧಾನದ ಮಾತುಗಳನ್ನಾಡಿದೆ.

ಬೆಳಗಾವಿಯಲ್ಲಿ ಯುವಕನೊಬ್ಬ ತಾನು ಪ್ರೇಮಿಸಿದ್ದ ಯುವತಿಯ ಜೊತೆ ಪರಾರಿಯಾಗಿದ್ದ. ಇದರಿಂದ ಆಕ್ರೋಶಗೊಂಡ ಯುವತಿ ಸಂಬಂಧಿಕರು ಯುವಕನ ತಾಯಿಯನ್ನು ಬೆತ್ತಲೆ ಮಾಡಿ ಆಕೆಯನ್ನು ಸಾರ್ವಜನಿಕವಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದರು. ಈ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಸಂಬಂಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಕರ್ನಾಟಕ ಹೈಕೋರ್ಟ್‌, ಪೊಲೀಸ್ ವ್ಯವಸ್ಥೆಯ ವೈಫಲ್ಯದ ವಿರುದ್ಧ ಕಿಡಿ ಕಾರಿದೆ.  Bharat Jodo Yatra: ಡಿಸಂಬರಿನಲ್ಲಿ 2 ನೇ ಹಂತದ ಭಾರತ್​ ಜೋಡೋ ಯಾತ್ರೆ

ಡಿಸೆಂಬರ್ 11 ರಂದು ಯುವತಿಯ ನಿಶ್ಚಿತಾರ್ಥ ನಿಗದಿಯಾಗಿತ್ತು. ಆದರೆ, ಯುವತಿಯು ಸಂತ್ರಸ್ತ ಮಹಿಳೆಯ ಮಗನೊಂದಿಗೆ ಡಿಸೆಂಬರ್ 10 ರಂದೇ ಗ್ರಾಮದಿಂದ ಪರಾರಿಯಾಗಿದ್ದಳು. ಈ ಘಟನೆಯ ಮಾಹಿತಿ ತಿಳಿದ ಕೂಡಲೇ ಯುವತಿಯ ಸಂಬಂಧಿಕರು ಯುವಕನ ಮನೆಗೆ ಧಾವಿಸಿ ಮನೆಯಲ್ಲಿದ್ದ ಆತನ ತಾಯಿಯನ್ನು ಹಿಡಿದು ಸಾರ್ವಜನಿಕವಾಗಿ ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದರು.compensation for rape victim

ಈ ಘಟನೆ ಕುರಿತು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌, ಮಹಾಭಾರತದ ಉದಾಹರಣೆ ನೀಡಿತು. ಮಹಾಭಾರತದಲ್ಲಿ ದ್ರೌಪದಿ ವಸ್ತ್ರಾಪಹರಣ ಮಾಡಲು ದುಶ್ಯಾಸನ ಸೇರಿದಂತೆ ಆತನ ಸಹೋದರರು ಮುಂದಾದಾಗ ಭಗವಾನ್ ಶ್ರೀ ಕೃಷ್ಣ ದ್ರೌಪದಿಯ ಮಾನ ರಕ್ಷಣೆ ಮಾಡಿದ. ಆದರೆ, ಇದು ದ್ವಾಪರ ಯುಗದ ಕಥೆ. ಇಂದಿನ ಕಲಿಯುಗದಲ್ಲಿ ದುರ್ಯೋಧನ ಹಾಗೂ ದುಶ್ಯಾಸನರೇ ತುಂಬಿದ್ದಾರೆ ಎಂದು ಹೈಕೋರ್ಟ್‌ ನ್ಯಾಯ ಪೀಠ ಹೇಳಿತು.

ಮಹಿಳೆ ದೈಹಿಕವಾಗಿ ಘಾಸಿಗೊಂಡಿರುವ ಜೊತೆಯಲ್ಲೇ ಮಾನಸಿಕವಾಗಿಯೂ ಆಘಾತಗೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, ಸತತ 2 ಗಂಟೆ ಕಾಲ ಮಹಿಳೆಗೆ ಥಳಿಸಲಾಗಿದೆ. ಈ ಪ್ರಕರಣದ ಆರೋಪಿಗಳು ಮೃಗಗಳಾಗಿದ್ದು, ಅವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿತು.

ಆರೋಪಿಗಳನ್ನು ಮಾನವರು ಎಂದೇ ಪರಿಗಣಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠ, ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾದ ಜಸ್ಟೀಸ್ ಪ್ರಸನ್ನ ಬಿ ವರಲೆ ಹಾಗೂ ಜಸ್ಟೀಸ್ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿತ್ತು.

ಮಹಿಳೆಯರು ಇಂದಿನ ದಿನಗಳಲ್ಲಿ ಸುರಕ್ಷತೆಯ ಕೊರತೆ ಎದುರಿಸುತ್ತಿದ್ದಾರೆ ಎಂದ ನ್ಯಾಯಪೀಠ, ಶೇಕ್ಸ್‌ಪಿಯರ್‌ನ ಪ್ರಖ್ಯಾತ ನಾಟಕ ಜೂಲಿಯಸ್ ಸೀಸರ್‌ನ ಉದಾಹರಣೆಯನ್ನೂ ನೀಡಿತು. ಅಷ್ಟೇ ಅಲ್ಲ, ಮಹಿಳೆಯು ಪುರುಷನಿಗೆ ಜನ್ಮ ನೀಡುತ್ತಾರೆ. ಅದರೆ ಪುರುಷರು ಮಹಿಳೆಯನ್ನು ತಮ್ಮ ಭೋಗದ ವಸ್ತುಗಳನ್ನಾಗಿ ಮಾಡಿಕೊಳ್ಳುತ್ತಾರೆ ಎಂಬ ಸಹೀರ್ ಲೂಧಿಯಾನ್ವಿ ಅವರ ಪ್ರಖ್ಯಾತ ಹಿಂದಿ ಕವನದ ಸಾಲುಗಳನ್ನೂ ನೆನಪಿಸಿದೆ.

 

AIDS HIV: ಏಡ್ಸ್ ರೋಗ​ ಸೋಂಕಿತರಲ್ಲಿ ಕರ್ನಾಟಕ 9ನೇ ಸ್ಥಾನ ! ಏಡ್ಸ್ ಹರಡುವಿಕೆ ಇಳಿಕೆ

Leave a Reply

Your email address will not be published. Required fields are marked *