Corrupt Siddaramaiah ಭ್ರಷ್ಟ ಸಿದ್ದರಾಮಯ್ಯ ಸರ್ಕಾರಃ ಆಯೋಗಕ್ಕೆ ದಾಖಲೆ ಸಲ್ಲಿಸಿದ ಕೆಂಪಣ್ಣ

 

Corrupt Siddaramaiah ಬೆಂಗಳೂರು, ಡಿ. 7 – ಹಾಲಿ ಸಿದ್ದರಾಮಯ್ಯ ಸರ್ಕಾರ ವಿರುದ್ಧ ಭ್ರಷ್ಟಾಚಾರದ ದಾಖಲೆಯನ್ನು  ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ್ ದಾಸ್‌ ಸಮಿತಿಗೆ ಕೆಂಪಣ್ಣ kempanna ಸಲ್ಲಿಸಿದ್ದಾರೆ.

ಹಿಂದಿನ ಬಿಜೆಪಿ BJP ಸರ್ಕಾರದ ಅವಧಿಯಲ್ಲಿ ವಿವಾದ ಸೃಷ್ಟಿಸಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಮೀಷನ್ ಆರೋಪಗಳ ವಿಚಾರಣೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್  ಸಮಿತಿಯನ್ನು ನೇಮಕ ಮಾಡಲಾಗಿತ್ತು.

ಕರ್ನಾಟಕ  ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಗುರುವಾರ ಬಿಜೆಪಿ ಮತ್ತು ಹಾಲಿ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ಭ್ರಷ್ಟಾಚಾರದ ದಾಖಲೆಯನ್ನು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ್ ದಾಸ್‌ ಸಮಿತಿಗೆ ಸಲ್ಲಿಸಿದ್ದಾರೆ.

ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ ಅವರು, ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ, ಹಾಲಿ ಸರ್ಕಾರದ ವಿರುದ್ಧ ದಾಖಲೆಗಳನ್ನು ಸಲ್ಲಿಸಿದ್ದೇನೆ. ಎಲ್ಲಾ ಇಲಾಖೆಯ ಕಾಮಗಾರಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಿದ್ದೇನೆ. ಎಲ್ಲಾ ಜಿಲ್ಲೆಗಳ ಕಾಮಗಾರಿ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.

ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್​ ಆರೋಪ ಮಾಡಿದ್ದ ಗುತ್ತಿದಾರರು,​ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಬಾಕಿ ಇರುವ ಬಿಲ್​ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರು. ಆದರೆ ಮನವಿಗೆ ಕಿವಿಗೊಡದ ಕಾಂಗ್ರೆಸ್ ಸರ್ಕಾರ ವಿರುದ್ಧ ಗುತ್ತಿಗೆದಾರರು ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.Bharat Jodo Yatra: ಡಿಸಂಬರಿನಲ್ಲಿ 2 ನೇ ಹಂತದ ಭಾರತ್​ ಜೋಡೋ ಯಾತ್ರೆ

Leave a Reply

Your email address will not be published. Required fields are marked *