Crop loss:   ರೈತರಿಗೆ ಬೆಳೆ ನಷ್ಟ ಪರಿಹಾರ ಒತ್ತಾಯಿಸಿ AAP ಪ್ರತಿಭಟಣೆ

Crop loss -ಮಂಗಳೂರು: ಅತೀವ ಬರಗಾಲದಿಂದ (Drought) ತೊಂದರೆಗೆ ಈಡಾಗಿರುವ ರೈತರಿಗೆ ಬೆಳೆ ನಷ್ಟ Crop loss ಪರಿಹಾರ Compensation  ನೀಡುವಲ್ಲಿ ಸೋತಿರುವ ಕರ್ನಾಟಕ Karnataka ರಾಜ್ಯ ಸರಕಾರ ಹಾಗೂ ಕೇಂದ್ರದ ಓಕ್ಕೂಟ ಸರಕಾರದ ವಿರುದ್ಧ ಡಿ. 4 ರಂದು ಆಮ್ ಆದ್ಮಿ ಪಾರ್ಟಿ(AAP) ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟಣೆಯನ್ನು ನಡೆಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರಸ್ಥಾನ ಮಂಗಳೂರಿನಲ್ಲಿ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಜಿಲ್ಲಾಧ್ಯಕ್ಷ ಡಾ. ವಿಶುಕುಮಾರ ಅವರ ನೇತ್ರತ್ವದಲ್ಲಿ ಆಪ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಆವರು “ರಾಜ್ಯ ಸರಕಾರ ಯಾವುದೇ ಕಾರಣ ನೀಡದೆ ಕೂಡಲೆ ಬೆಳೆ ನಷ್ಟ ಪರಿಹಾರವನ್ನು ರೈತರ ಖಾತೆಗೆ ವರ್ಗಾಯಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು” ಎಂದು ಹೇಳಿದರು. ಕರ್ನಾಟಕದ ಒಟ್ಟು 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಬಹುತೇಕ ರಾಜ್ಯಕ್ಕೆ ರಾಜ್ಯವೇ ಬರ ಪರಿಸ್ಥಿತಿಯಂದ ಕಂಗೆಟ್ಟಿದೆ. ಈ ಪೈಕಿ 196 ತಾಲೂಕುಗಳನ್ನು ತೀವ್ರ ಬರ ಪೀಡಿತ ಎಂದು ವರ್ಗಿಕರಿಸಲಾಗಿದೆ ಎಂದು ಅವರು ಹೇಳಿದರು.

ಸುಮಾರು 48 ಲಕ್ಷ ಹೆಕ್ಟೆರ್ ಗಿಂತ ಹೆಚ್ಚಿನ ಕೃಷಿ ಮತ್ತು ತೋಟಗಾರಿಕ ಬೆಳೆಗಳು ಹಾನಿಗೂಳಗಾಗಿವೆ. ಹಾನಿಗೂಂಡ ಬೆಳೆಗಳ ಒಟ್ಟು ಮೌಲ್ಯ 35162.05 ಕೋಟಿ ರೂಪಾಯಿಗಳಾಗಿವೆ. ಕೇಂದ್ರದಿAದ ಬಂದ 10 ಸದಸ್ಯರ ಅಧ್ಯಯನ ತಂಡ ಬರ ಪರಿಸ್ಥಿತಿ ವಿಕ್ಷಣೆ ವೇಳೆ ನಮ್ಮಲ್ಲಿ ಬಂದಿರುವುದು ಹಸಿರು ಬರ ಎಂಬುವುದನ್ನು ಮನಗೊಳ್ಳಲು ವಿಫಲವಾಗಿದೆ. 15ನೇ ಹಣಕಾಸು  ಆಯೋಗವು ಕರ್ನಾಟಕಕ್ಕೆ ಶಿಫಾರಸು ಮಾಡಿರುವ 5,495 ಕೋಟಿ ವಿಶೇಷ್ ಅನುದಾನವನ್ನು ಕರ್ನಾಟಕದಿಂದಲೆ ರಾಜ್ಯಸಭೆಗೆ ಆಯ್ಕೆಯಾಗಿ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ ಅವರೆ ತಿರಸ್ಕರಿಸಿದ್ದಾರೆ. ಇದನೆಲ್ಲಾ ರಾಜ್ಯ ಸರಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು.

ಅತೀ ಶೀಘ್ರದಲ್ಲಿ ಅವರು ಈ ಬಗ್ಗೆ ಕಾರ್ಯಾಚರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು Dr. B. K. ವಿಶುಕುಮಾರ ಹೇಳಿದರು.  ಶ್ರ ಖಲಂದರ್ ಎಲಿಮಲೆ – ಪ್ರಧಾನ ಕಾರ್ಯದರ್ಶಿ,  ಶಾನನ್ ಪಿಂಟೋ –  ಸಂಘಟನಾ ಕಾರ್ಯದರ್ಶಿ,  ಜನಾರ್ದನ ಬಂಗೇರ – ಸಂಘಟನಾ ಕಾರ್ಯದರ್ಶಿ, ವಿದ್ಯಾ ರಾಕೇಶ್ – ಅಧ್ಯಕ್ಷೆ ಜಿಲ್ಲಾ ಮಹಿಳಾ ಘಟಕ,   ಕಬೀರ್ ಕಾಟಿಪಳ್ಳ – ಜಿಲ್ಲಾ ಕಾರ್ಯದರ್ಶಿ,  ಸೀಮಾ ಮಡಿವಾಳ್ – ಜಿಲ್ಲಾ ಕಾರ್ಯದರ್ಶಿ,  ಗ್ಲಾವಿನ್ ಡಿಸೋಜಾ – ಜಿಲ್ಲಾ ಕಾರ್ಯದರ್ಶಿ,  ಫ್ಲೋರಿನ್ ಗೋವಸ್ – ಜಿಲ್ಲಾ ಕಾರ್ಯದರ್ಶಿ ಥಾಮಸ್ ಮಥಿಯಾಸ್ – ಜಿಲ್ಲಾ ಕಾರ್ಯದರ್ಶಿ, ದೇವಿಪ್ರಸಾದ್ ಬಜಿಲಕೇರಿ – ಜಿಲ್ಲಾ ಸಾಮಾಜಿಕ ಮಾಧ್ಯಮ ಉಸ್ತುವಾರಿ, ರಾಜ್ಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ನವಿನಕುಮಾರ್ ಪೂಜಾರಿ,  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜ್ಯ ಉಪಾಧ್ಯಕ್ಷರು ವಿವೇಕಾನಂದ ಸಾಲಿನ್ಸ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Crop loss:ರೈತರಿಗೆ ಮೊದಲ ಬರ ಪರಿಹಾರ: ಮುಂದಿನ ವಾರದೊಳಗೆ ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

(ಬೆಳಗಾವಿ ವರದಿ)

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ  ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಎಲ್ಲರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರೆಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ, ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು. ನಿಗದಿತವಾಗಿ ತಮಗೆ ನಿಗಧಿ ಆಗಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ಪರಿಹಾರ ಘೋಷಿಸಲಾಗಿದ್ದು, ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರ ಸಮರ್ಪಕವಾಗಿ ನಡೆಯಲು ನಿಮ್ಮ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದ ಹಾಗೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು- ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದ್ದು, ಇದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನೂ ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.    Bharat Jodo Yatra: ಡಿಸಂಬರಿನಲ್ಲಿ 2 ನೇ ಹಂತದ ಭಾರತ್​ ಜೋಡೋ ಯಾತ್ರೆ

ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ  ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀರ್ಘವೇ ನಿವಾರಿಸಬೇಕು ಎಂದು ತಿಳಿಸಿದರು.

ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿಯೂ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳನ್ನು ಅಡ್ವೊಕೇಟ್‌ ಜನರಲ್‌ ಜೊತೆ ಚರ್ಚಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳು ಜನ ಸಂಪರ್ಕ ಸಭೆ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು.

ನಿಮ್ಮ ಕಾರ್ಯವೈಖರಿಗೆ ಅನುಗುಣವಾಗಿ ಸರ್ಕಾರಕ್ಕೆ ಹೆಸರು ಬರುತ್ತದೆ ಎಂದು ತಿಳಿಸಿದರು. ಅನಿವಾರ್ಯ ಸಂದರ್ಭಗಳನ್ನು ಹೊರತು ಪಡಿಸಿ, ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು. ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆ ಎಂದು ತಿಳಿಸಿದರು.

ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವ ಕುರಿತು ಆದ್ಯತೆ ನೀಡಲು ಸಲಹೆ ನೀಡಿದ ಮುಖ್ಯಮಂತ್ರಿಗಳು ಟೆಂಡರ್‌ ಅಂದಾಜು ಸಿದ್ಧಪಡಿಸುವಾಗಲೇ ಎಲ್ಲ ಅಂಶಗಳನ್ನೂ ಒಳಗೊಂಡಂತೆ ಸಮಗ್ರವಾಗಿ ಅಂದಾಜನ್ನು ಸಿದ್ಧಪಡಿಸಬೇಕು. ಪರಿಷ್ಕೃತ ಅಂದಾಜುಗಳನ್ನು ಸಲ್ಲಿಸುವುದರಿಂದ ಯೋಜನೆಯ ವೆಚ್ಚ ಗಣನೀಯವಾಗಿ ಹೆಚ್ಚುತ್ತಿರುವುದಲ್ಲದೆ ಅನುಷ್ಠಾನವೂ ವಿಳಂಬವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ಹಿರಿಯ ಅಧಿಕಾರಿಗಳ ಸಮಿತಿ ರಚಿಸಿದ್ದು, ಈ ಸಮಿತಿಯು ಮಾರ್ಗಸೂಚಿಗಳನ್ನು ರೂಪಿಸುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಯವರ ಅಪರ  ಕಾರ್ಯದರ್ಶಿ ಎಲ್.ಕೆ. ಅತೀಕ್‌ ತಿಳಿಸಿದರು.

ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ತೆರಿಗೆಯೇತರ ರಾಜಸ್ವ ಸಂಗ್ರಹ ಹೆಚ್ಚಳ ಮಾಡುವ ಬಗ್ಗೆ ಆಡಳಿತ ಸುಧಾರಣಾ ಆಯೋಗ-2 ಮಾಡಿರುವ ಶಿಫಾರಸುಗಳನ್ನು ಎಲ್ಲ ಕಾರ್ಯದರ್ಶಿಗಳು ಅಧ್ಯಯನ ಮಾಡುವಂತೆ ಸೂಚಿಸಿದರು.

AIDS HIV: ಏಡ್ಸ್ ರೋಗ​ ಸೋಂಕಿತರಲ್ಲಿ ಕರ್ನಾಟಕ 9ನೇ ಸ್ಥಾನ ! ಏಡ್ಸ್ ಹರಡುವಿಕೆ ಇಳಿಕೆ

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *