DK DCC: ದ.ಕ. ಡಿಸಿಸಿ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪುತ್ತೂರಿನ ನಿತ್ಯಾನಂದ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ ಅವರನ್ನು ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನ ಬಿಜೈ ನಿವಾಸಿಯಾಗಿರುವ ನಿತ್ಯಾನಂದ ಶೆಟ್ಟಿ ಅವರು ಈ ಹಿಂದೆ ದ.ಕ. ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾಗಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ, ಜಿಲ್ಲಾ ಎನ್.ಎಸ್.ಯು.ಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿದ್ದಾರೆ.

Leave a Reply

Your email address will not be published. Required fields are marked *