Dogs License mandatory in Mangaluru City- 2023-24 Pet Dogs ಸಾಕು ನಾಯಿಗಳಿಗೆ ಪರವಾನಗಿ ಕಡ್ಡಾಯ

Pet Dog/ Dog License

ಮಂಗಳೂರು,ನ. 27- Dogs License ಸಾಕು ನಾಯಿಗಳಿಗೆ ಪಾಲಿಕೆಯಿಂದ (Dog License)ಪರವಾನಗಿ ಪಡೆಯಲು ಅರ್ಜಿ ಪ್ರತಿ ಪಡೆದುಕೊಳ್ಳುವುದು ಮಂಗಳೂರು ಮಹಾನಗರಪಾಲಿಕೆ ಕಡ್ಡಾಯ ಮಾಡಿದೆ.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ೬೦ ವಾರ್ಡ್ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುವುದರಿಂದ Dog License ಪಡೆಯವುದನ್ನು ಕಡ್ಡಾಯ ಮಾಡಿ ನಿಯಮವನ್ನು ಬಿಗುವಾಗಿ ಜಾರಿ ಮಾಡಲಾಗುತ್ತಿದೆ.

ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ ಪರಿಣಾಮಗಳು ಬೀರುತ್ತಿದೆ ಹಾಗೂ ನಗರದಲ್ಲಿ ರೇಬಿಸ್ ಕಾಯಿಲೆಗಳು ಹರಡುವ ಸಂಭವ ಹೆಚ್ಚಾಗಿರುತ್ತದೆ. ಈ ಎಲ್ಲ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆಯು ಈಗಾಗಲೇ ನಗರದಲ್ಲಿ ಸಾಕು ನಾಯಿಗಳಿಗೆ (Dog License) ಪರವಾನಿಗೆಯನ್ನು ಪಡೆಯುವಂತೆ ಕ್ರಮಕೈಗೊಳ್ಳಲಾಗಿದೆ.

Pet Dogs ಸಾಕು ನಾಯಿಗಳಿಗೆ ಪಾಲಿಕೆಯಿಂದ ಪರವಾನಗಿ Licence ಪಡೆಯಲು ಸೂಚನೆ

ದಾಖಲೆಗಳು: ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಪಾಲಿಕೆಯಿಂದ (Dog Licence)ಪರವಾನಗಿ ಪಡೆಯಲು ಅರ್ಜಿ ಪ್ರತಿ ಪಡೆದುಕೊಳ್ಳಬೇಕು. ಸಾಕು ನಾಯಿಗೆ ನೀಡಲಾಗಿರುವ ಲಸಿಕಾ ದಾಖಲೆ, ಮಾಲೀಕರ ಆಧಾರ್ ಕಾರ್ಡ್, ನೆರೆಹೊರೆಯವರಿಂದ ನಿರಾಕ್ಷೇಪಣಾ ಪತ್ರ, ಸಾಕು ನಾಯಿಯ 2 ಭಾವಚಿತ್ರ ಇತ್ಯಾದಿ ದಾಖಲೆಗಳನ್ನು ಸಲ್ಲಿಸಿ ಪರವಾನಿಗೆಯನ್ನು ಪಡೆದುಕೊಳ್ಳಬೇಕು.

ಅದೇ ರೀತಿ ಸಾಕು ಪ್ರಾಣಿಗಳು ಮತ್ತು ಮರಿಗಳನ್ನು ರಸ್ತೆಯ ಬದಿಗಳಲ್ಲಿ ಬಿಡುವುದು ಹಾಗೂ ಸ್ಥಳೀಯ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುವುದು ಕಂಡುಬಂದಲ್ಲಿ ಸಾಕು ಪ್ರಾಣಿಗಳ ಮಾಲೀಕರ ವಿರುದ್ಧ ಪಾಲಿಕೆಯು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದೆಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pet Dogs ರೇಬೀಸ್ ರೋಗದಿಂದ ಸಾವು

ಜನನ ನಿಯಂತ್ರಣ ಕಾರ್ಯಕ್ರಮದ (ಎಬಿಸಿ) ಅಸಮರ್ಪಕತೆ ಇದಕ್ಕೆ ಕಾರಣವಾಗಿದೆ. ಅನೇಕ ಎನ್‌ಜಿಒಗಳು ಮುನ್ಸಿಪಲ್ ಕಾರ್ಪೊರೇಷನ್‌ಗಳ ಪರವಾಗಿ ಕಾರ್ಯಾಚರಣೆ ಕೈಗೊಳ್ಳಲು ಉತ್ಸುಕರಾಗಿದ್ದರೂ, ಅಸಮರ್ಪಕ ಹಣ ಹಂಚಿಕೆಯು ಇದಕ್ಕೆ ತಡೆಯೊಡ್ಡಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವರದಿಯ ಪ್ರಕಾರ, ದೇಶದಲ್ಲಿ ಈ ವರ್ಷ 250 ಜನರು ರೇಬಿಸ್‌ನಿಂದ ಸಾವನ್ನಪ್ಪಿದ್ದು, ಅವರಲ್ಲಿ ಹೆಚ್ಚಿನವರು ಕರ್ನಾಟಕದ 32 ಮಂದಿ ಆಗಿದ್ದಾರೆಂದು ತಿಳಿಸಿದೆ.

ಕೆಲವರು ಆಂಟಿ ರೇಬಿಸ್ ಲಸಿಕೆ ತೆಗೆದುಕೊಂಡರೂ ಕೂಡ ಸಾವನ್ನಪ್ಪಿದ್ದಾರೆಂದು ವರದಿ ಹೇಳಿದೆ. 20,000 ಭಾರತೀಯರು ರೇಬಿಸ್‌ನಿಂದ ಸಾವನ್ನಪ್ಪಿದ್ದಾರೆ. ಇದರಲ್ಲಿ ಶೇ.60ರಷ್ಟು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿದ್ದಾರೆಂದು ತಿಳಿಸಿದೆ.
ಪ್ರಾಣಿ ಸಂರಕ್ಷಣೆದಾರರು ಮತ್ತು ನಗರ ಪಾಲಿಕೆಗಳ ನಡುವಿನ ಜಗ್ಗಜಗ್ಗಾಟವು ಬೀದಿನಾಯಿಗಳ ಸಂಖ್ಯೆ ಮತ್ತು ನಾಯಿಗಳ ದಾಳಿಯ ಹೆಚ್ಚಳಕ್ಕೆ ಮತ್ತೊಂದು ಕಾರಣ ಎಂದು ತಜ್ಞರು ತಿಳಿಸಿದ್ದಾರೆ.
ಪ್ರಾಣಿಗಳಿಗೆ ಆಹಾರ ನೀಡುವವರು ಮತ್ತು ಇತರರ ನಡುವೆ ಘರ್ಷಣೆಗಳು ನಡೆದಿದೆ. ಪ್ರಾಣಿ ಪ್ರಿಯರಿಗೆ ಅನಿಮಲ್ ಫೀಡರ್ ಕಾರ್ಡ್ ನೀಡುವ ಪರಿಕಲ್ಪನೆ 2012 ರಲ್ಲಿ ಪ್ರಾರಂಭವಾಯಿತು, ಆದರೆ, ಇದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಈ ಕಾರ್ಡ್ ನಾಗರಿಕರಿಗೆ ನಾಯಿಗಳಿಗೆ ಆಹಾರ ನೀಡಲು ಪರವಾನಗಿ ನೀಡುತ್ತದೆ, ಆದರೆ ಅದನ್ನು ಹೊಂದಿಲ್ಲದ ಮತ್ತು ನಾಯಿಗಳಿಗೆ ಆಹಾರವನ್ನು ನೀಡುವವರನ್ನು ನಿಲ್ಲಿಸಿ ಪುರಸಭೆಗೆ ವರದಿ ಮಾಡಬಹುದು.

Dog License Pet dogs
dog riding boat

ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಈ ಕಾರ್ಡ್‌ಗಳನ್ನು ನೀಡಲಾಗುತ್ತದೆ, ಆದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದಲ್ಲಿ ಅಂತಹ ಪ್ರಾಣಿ ಪ್ರೇಮಿಗಳ ಸಂಖ್ಯೆಯ ವರದಿಯನ್ನು ಹೊಂದಿಲ್ಲ. ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕರ್ನಾಟಕದ ಇತರ ಭಾಗಗಳಲ್ಲಿ ಯಾವುದೇ ಕಾರ್ಡ್ ನೀಡಲಾಗಿಲ್ಲ. ಆದರೆ ಮಡಿಕೇರಿ ಮುಂತಾದ ಕಡೆ ಫೀಡರ್ ಗಳು ಎಬಿಸಿ ಕಾರ್ಯಕ್ರಮಕ್ಕೆ ನಾಯಿ ಹಿಡಿಯಲು ನಗರಸಭೆಗೆ ನೆರವಾಗುತ್ತಿದ್ದಾರೆ.
ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು, ಯಾವುದೇ ಅಂತರವಿಲ್ಲದಂತೆ ನೋಡಿಕೊಳ್ಳುವುದು ಮುಖ್ಯ. “ಮೂರು ಗಂಡು ನಾಯಿಗಳು ತಪ್ಪಿಸಿಕೊಂಡರೂ ಪರವಾಗಿಲ್ಲ, ಪ್ರತಿ ಹೆಣ್ಣನ್ನು ಎಬಿಸಿ ಕಾರ್ಯಕ್ರಮಕ್ಕೆ ಸೆರೆಹಿಡಿಯುವುದು ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ.

Apply BCW metric Scholarship ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಮಾಡುವುದು ಸುಲಭವಲ್ಲಯ ಆದರೆ ಎಲ್ಲರ ಸಹಕಾರದಿಂದ ಅದು ಸಾಧ್ಯ. ಫೀಡರ್‌ಗಳು ಸೇರಿದಂತೆ ನಾಗರಿಕರು ಪ್ರಾಣಿಗಳನ್ನು ಸೆರೆಹಿಡಿಯುವಲ್ಲಿ ಮತ್ತು ಸಂತಾನಹರಣಗೊಳಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಇದಕ್ಕೆ ದೊಡ್ಡ ಮೂಲಸೌಕರ್ಯಗಳ ಅಗತ್ಯವಿಲ್ಲ. “ಹಿಂದೆ ಅನುಸರಿಸಿದ ಪ್ರಕ್ರಿಯೆಯನ್ನು ಪುನರಾವರ್ತಿಸಬಹುದು. ನಾಯಿಯನ್ನು ಸೆರೆಹಿಡಿದು, ಸಂತಾನಹರಣ ಮಾಡಿ ಅದೇ ಸ್ಥಳದಲ್ಲಿ ಬಿಡಲಾಗುತ್ತದೆ. ಇದು ಅವರ ಪ್ರದೇಶಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುತ್ತದೆ ಮತ್ತು ಇದರಿಂದ ಬೀದಿನಾಯಿಗಳ ಸಂಖ್ಯೆ ಕೂಡ ನಿಯಂತ್ರಣದಲ್ಲಿರುತ್ತದೆ.

Street Dog ಬೀದಿ ನಾಯಿ ಕಡಿತ: ಗಾಯಕ್ಕೆ 5 ಸಾವಿರ, ಮೃತಪಟ್ಟರೆ 5 ಲಕ್ಷ ಪರಿಹಾರ

ಕರ್ನಾಟಕದಲ್ಲಿ ಇನ್ನು ಮುಂದೆ ಎಲ್ಲೇ ಆದರೂ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡರೆ 5 ಸಾವಿರ ಹಾಗೂ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ ಸಿಗಲಿದೆ. ಈ ಕುರಿತು ಸರ್ಕಾರದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆಯಾಗಿದ್ದು. ಅದು ಸದ್ಯದಲ್ಲೇ ಅಂತಿಮಗೊಳ್ಳಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಪ್ರಾಣಿಗಳ ಜನ ನಿಯಂತ್ರಣ ಅಧಿನಿಯಮ ಜಾರಿಕೋರಿ ವಕೀಲ ಎಲ್‌. ರಮೇಶ್‌ ನಾಯ್ಕ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಸರ್ಕಾರಿ ವಕೀಲರು, ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 2023ರ ಅ.6ರಂದು ಸಭೆ ನಡೆಸಲಾಯಿತು. ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5 ಸಾವಿರ ಹಾಗೂ ಜೀವ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಲು ಸಭೆಯಲ್ಲಿ ಚರ್ಚಿಸಲಾಗಿದೆ. ಎರಡನೇ ಸಭೆ ನಡೆಸಿ ಸದ್ಯದಲ್ಲೇ ಪರಿಹಾರ ನಿಗದಿ ಅಂತಿಮಗೊಳಿಸಲಾಗುವುದು. ಅದಕ್ಕೆ ಸ್ವಲ್ಪ ಕಾವಲಾವಕಾಶ ನೀಡಬೇಕು ಎಂದು ಕೋರಿ ಪ್ರಮಾಣ ಪತ್ರ ಸಲ್ಲಿಸಿದರು.

ಕೋರಿಕೆ ಮಾನ್ಯ ಮಾಡಿದ ನ್ಯಾಯಪೀಠ, ನಾಯಿ ಸೇರಿದಂತೆ ಬೀದಿ ಪ್ರಾಣಿಗಳಿಗೆ ಆಹಾರ ನೀಡುವ ಮತ್ತು ಮಾನವ ಜೊತೆಗಿನ ಅವುಗಳ ಸಂಘರ್ಷ ತಪ್ಪಿಸಲು ರೂಪಿಸಲಾಗಿರುವ ಮಾರ್ಗಸೂಚಿಗಳಿಗೆ ಸರ್ಕಾರ ವ್ಯಾಪಕ ಪ್ರಚಾರ ನೀಡಬೇಕು. ಇನ್ನೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮುಂದಿನ ನಾಲ್ಕು ವಾರಗಳಲ್ಲಿ ಎರಡನೇ ಸಭೆ ನಡೆಸಬೇಕು. ಸಭೆಯಲ್ಲಿ ಚರ್ಚಿಸಿ ಕೈಗೊಂಡ ಕ್ರಮಗಳ ಕುರಿತು 6 ವಾರದಲ್ಲಿ ಮಾಹಿತಿ ಒದಗಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಅರಿವು ಮೂಡಿಸಲು ಸೂಚನೆ: ಇದೇ ವೇಳೆ ನ್ಯಾಯಾಲಯ, ಬೀದಿ ಪ್ರಾಣಿಗಳ ಆಹಾರ ಪೂರೈಕೆಗೆ ಮಾರ್ಗಸೂಚಿಗಳನ್ನು ರಚಿಸಲಾಗಿದೆ. ಆದರೆ, ಅವುಗಳ ಕುರಿತು ಸಾರ್ವಜನಿರಿಕರಿಗೆ ಅರಿವು ಇಲ್ಲವಾಗಿದೆ. ಮಾರ್ಗಸೂಚಿಗಳ ಬಗ್ಗೆ ಸಾರ್ವಜನಿಕರು ಹಾಗೂ ನಿವಾಸಿಗಳಿಗೆ ಅರಿವು ಮೂಡಿಸದೆ ಹೋದರೆ, ಅವುಗಳು ಪರಿಣಾಮಕಾರಿಯಾಗಿ ಜಾರಿ ಮಾಡಲು ಸಾಧ್ಯವಿಲ್ಲ. ಮಾರ್ಗಸೂಚಿಗಳನ್ನು ಜಾರಿಯಾಗಬೇಕಾದರೆ, ಅವುಗಳ ಬಗ್ಗೆ ರಾಜ್ಯ ಸರ್ಕಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ವ್ಯಾಪಕ ಪ್ರಚಾರ ನೀಡಬೇಕು ಎಂದು ಸೂಚಿಸಿದೆ. ಅಲ್ಲದೆ, ನಗರದ ಜನದಟ್ಟಣೆ ಪ್ರದೇಶಗಳಲ್ಲಿ ಮತ್ತು ನೋಂದಾಯಿತ ಸಹಕಾರ ಸಂಘಗಳಲ್ಲಿ ಮಾಹಿತಿ ಇಲಾಖೆಯಿಂದ ಮಾರ್ಗಸೂಚಿಗಳ ಕುರಿತು ಅರಿವು ಮೂಡಿಸುವ ಕರಪತ್ರಗಳ ಹಂಚುವ ವಿಧಾನಗಳನ್ನು ಸರ್ಕಾರ ಅನುಸರಿಸಬೇಕು. ಮಾರ್ಗಸೂಚಿಗಳ ಕುರಿತ ಮಾಹಿತಿಯನ್ನು ಒಳಗೊಂಡ ಕಿರುಚಿತ್ರಗಳನ್ನು ಪ್ರಸಾರ ಮಾಡುವಂತೆ ಪ್ರಾದೇಶಿಕ ಟಿವಿ ಮಾಧ್ಯಮ, ಚಿತ್ರ ಮಂದಿರಗಳ ಮಾಲೀಕರಿಗೆ ಸರ್ಕಾರ ಮನವಿ ಮಾಡಬೇಕು. ಗ್ರಾಮೀಣ ಅಥವಾ ಸ್ಥಳೀಯ ಮಟ್ಟದಲ್ಲಿ ತಮಟೆ ಬಾರಿಸುವಂತಹ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತಿ, ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಸೂಚಿಸಬೇಕು. ಈ ಸಲಹೆಗಳಲ್ಲದೇ ಇನ್ನಿತರ ವಿಧಾನಗಳ ಮೂಲಕ ಸರ್ಕಾರ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬಹುದಾಗಿದೆ ಎಂದು ನ್ಯಾಯಪೀಠ ಹೇಳಿದೆ.

Dog license/permit is mandatory for all pet dogs in Mangalore City Corporation limits, owners will have to submit documents about periodic vaccination of their pets along with application for the license, validity of which is one year.

 

Leave a Reply

Your email address will not be published. Required fields are marked *