ಗದಗ, ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ಏಕಕಾಲದಲ್ಲಿ ನಡೆದ ಜನತಾ ದರ್ಶನದಲ್ಲಿ ಸಂಜೆ 6.30 ರವರೆಗೆ 6,684 ದೂರುಗಳು ಮತ್ತು ಕುಂದುಕೊರತೆಗಳ ಕುರಿತ ಅರ್ಜಿಗಳನ್ನು ಸ್ವೀಕರಿಸಿರುವುದು ತಿಳಿದುಬಂದಿದೆ.
ಆಯಾ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನತಾ ದರ್ಶನದಲ್ಲಿ ಶಾಸಕರು, ಸಂಸದರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.
“ರಾಜ್ಯಾದ್ಯಂತ ಸಂಜೆ 6.30 ರವರೆಗೆ 6,684 ದೂರುಗಳು ಮತ್ತು ಕುಂದುಕೊರತೆಗಳನ್ನು ಸ್ವೀಕರಿಸಲಾಗಿದ್ದು, 21 ಸಮಸ್ಯೆಗಳ ಕುರಿತು ಸ್ಥಳದಲ್ಲೇ ಪರಿಹರಿಸಲಾಗಿದೆ. ಉಳಿದ 6,663 ಅರ್ಜಿಗಳನ್ನು ನೋಂದಾಯಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗಿದೆ” ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಅಂದರೆ 2,100 ದೂರುಗಳು ದಾಖಲಾಗಿವೆ. ಆರ್‌ಡಿಪಿಆರ್ ಇಲಾಖೆಗೆ 1,000 ಕ್ಕೂ ಅಧಿಕ ದೂರುಗಳು ಬಂದಿವೆ. ಹೆಚ್ಚಿನ ದೂರುಗಳನ್ನು ಆಯಾ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸಲ್ಲಿಸಲಾಗಿದ್ದರೆ, ಕೆಲವು ದೂರುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ, ಕೆಲವೇ ದೂರುಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
Hi, this is a comment.
To get started with moderating, editing, and deleting comments, please visit the Comments screen in the dashboard.
Commenter avatars come from Gravatar.