Karnataka BJP ಬಿಜೆಪಿಯ ಅತೃಪ್ತರ ಟೀಮ್ ಫುಲ್ ಆಕ್ಟೀವ್

Karnataka BJP ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಕ್ಷೀಪ್ರ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಕಾಂಗ್ರೆಸ್ ಸರ್ಕಾರಕ್ಕೆ ಮುಡಾ ಹಗರಣ ಸಂಕಷ್ಟ ತಂದಿಟ್ಟಿದೆ. ಇದೇ ಹಗರಣದ ವಿರುದ್ಧ ಹೋರಾಟ ಮಾಡಲು ಮುಂದಾಗಿರುವ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ದೋಸ್ತಿಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯ ಬಿಜೆಪಿಯಲ್ಲೇ ಆಂತರಿಕ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅತೃಪ್ತರ ಟೀಮ್ ಫುಲ್ ಆಕ್ಟೀವ್ ಆಗಿದೆ.

ಬೆಂಗಳೂರು, (ಆಗಸ್ಟ್ 01): ಒಂದೆಡೆ ಮುಡಾ MUDA ಹಗರಣ ಆರೋಪದಲ್ಲಿ ರಾಜ್ಯಪಾಲರ ನಡೆ ರಾಜ್ಯರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದ್ದರೆ, ಮತ್ತೊಂದೆಡೆ(Karnataka BJP) ಬಿಜೆಪಿ ಪಾಳಯದಲ್ಲೇ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಹೌದು.. ಬಿಜೆಪಿಯ ಅತೃಪ್ತರ ಟೀಮ್ ಫುಲ್ ಆಕ್ಟೀವ್ ಆಗಿದ್ದು, ಅತೃಪ್ತ ನಾಯಕರನ್ನು ಒಂದು ಕಡೆ ಸೆಳೆಯುವ ಪ್ರಯತ್ನವನ್ನು ಬಸನಗೌಡ ಪಾಟೀಲ್ ಮತ್ತು ರಮೇಶ್ ಜಾರಕಿಹೊಳಿಯಿಂದ ಕಸರತ್ತು ನಡೆದಿದೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನ ರಹಸ್ಯ ಸ್ಥಳದಲ್ಲಿ ಕುಳಿತು ಅಸಮಾಧಾನಿತ ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ ಜೊತೆ ಚರ್ಚೆ ನಡೆಸಿದ್ದಾರೆ.

yatnal at Bangaarappa residency
yatnal at Bangaarappa residency

ಪ್ರತ್ಯೇಕ ಸಭೆ ನಡೆಸುವ ಮೂಲಕ ವಿಜಯೇಂದ್ರ ನಾಯಕತ್ವಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಬೆಂಗಳೂರು ಟು ಮೈಸೂರು ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಅತೃಪ್ತ ನಾಯಕರು ತೀರ್ಮಾನಿಸಿದ್ದಾರೆ.

ಬೆಂಗಳೂರಿನಲ್ಲಿ ಸದಾಶಿವನಗರದಲ್ಲಿರುವ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಅತೃಪ್ತರ ಸಭೆ ನಡೆದಿದೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್​, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ ಮಹತ್ವದ ಸಭೆ ನಡೆಸಿದ್ದು, ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ವೇಳೆ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಇನ್ನೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ಮಾಡಲು ಯತ್ನಾಳ್, ರಮೇಶ್ ಜಾರಕಿಹೊಳಿ ಮುಂದಾಗಿದ್ದು, ವಿಜಯೇಂದ್ರ ಬಣದ ವಿರುದ್ಧ ಹೈಕಮಾಂಡ್​ಗೆ ಚಾರ್ಜ್​ಶೀಟ್​ ಸಲ್ಲಿಸಲು ಪ್ಲ್ಯಾನ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Karnataka BJP ಸಮಾನ ಮನಸ್ಕರ  ಸಭೆಯಲ್ಲಿ ಏನೇನು ಆಯ್ತು?

ಕುಮಾರ್​ ಬಂಗಾರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಮೈಸೂರು ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ನಿರ್ಧರಿಸಲಾಗಿದೆ. ಒಂದು ವೇಳೆ ಹೈಕಮಾಂಡ್, ಪಕ್ಷದಿಂದ ಪಾಲ್ಗೊಳ್ಳಲು ಸೂಚಿಸಿದ್ರೆ ಭಾಗಿಯಾಗಬೇಕೆನ್ನುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆ ಬಳಿಕ ಸೋಲಿನ ಕಾರಣ ಹುಡುಕುವ ಕೆಲಸ ಆಗಿಲ್ಲ.

ಇದನ್ನು ಓದಿ- Bharat Jodo Yatra: ಡಿಸಂಬರಿನಲ್ಲಿ 2 ನೇ ಹಂತದ ಭಾರತ್​ ಜೋಡೋ ಯಾತ್ರೆ

ಈ ಬಗ್ಗೆ ಹೇಳಿದರೂ ಸರಿಪಡಿಸುವ ಕೆಲಸ ಆಗಿಲ್ಲ. ರಾಷ್ಟ್ರೀಯ ಅಧ್ಯಕ್ಷರ ನೇಮಕ ಆಗುವ ವೇಳೆ ರಾಜ್ಯ ಘಟಕಕ್ಕೂ ಚುನಾವಣೆ ನಡೆಯಬೇಕು. ಚುನಾವಣೆ ಆಧಾರದಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗಬೇಕು. ಈಗ ನಾಮನಿರ್ದೇಶನ ಮಾಡಿರುವ ಬಿಜೆಪಿ ರಾಜ್ಯ ಅಧ್ಯಕ್ಷರಿದ್ದಾರೆ. ಚುನಾವಣೆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗಲಿ ಎನ್ನುವ ಬಗ್ಗೆ ಚರ್ಚಿಸಿದ್ದು, ಈ ಎಲ್ಲಾ ಅಂಶಗಳನ್ನು ಸಮಾನ ಮನಸ್ಕರ ನಾಯಕರ ಸಭೆ ಬಳಿಕ ಹೈಕಮಾಂಡ್​ ಮುಂದಿಡಲು ತೀರ್ಮಾನಿಸಿದ್ದಾರೆ.

Siddaramaiah

Karnataka BJP ಹೈಕಮಾಂಡ್​ ಭೇಟಿಗೆ ನಿರ್ಧರಿಸಲಾಗಿದೆ ಎಂದ ಯತ್ನಾಳ್

ಕರ್ನಾಟಕದಲ್ಲಿ ಬಿಜೆಪಿ ಸರಿ ಹೋಗುತ್ತಿಲ್ಲ. ಅಪ್ಪ ಮಕ್ಕಳ ಪಕ್ಷವಾಗಿರುವುದನ್ನು ಮುಕ್ತ ಮಾಡಬೇಕು . ಲೋಕಸಭಾ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಮತ್ತು ಯಡಿಯೂರಪ್ಪ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದನ್ನು ಹೈಕಮಾಂಡ್ ಗಮನಕ್ಕೆ ತರಬೇಕು. ಅದಕ್ಕೆ ಸಮಾನ ಮನಸ್ಕರು, ಸೋತ ಅಭ್ಯರ್ಥಿಗಳು, ಗೆದ್ದವರು ಎಲ್ಲರೂ ಕೂಡಾ ಹೈಕಮಾಂಡ್ ಗೆ ವಿಜಯೇಂದ್ರ ಮತ್ತು ಯಡಿಯೂರಪ್ಪ ಮಾಡಿರುವ ಪಕ್ಷ ವಿರೋಧಿ ಕೆಲಸವನ್ನು ತಿಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮೊದಲು ನಾವೆಲ್ಲರೂ ದೊಡ್ಡ ಸಭೆ ಮಾಡಲು ತೀರ್ಮಾನ ಮಾಡಿದ್ದೇವೆ. ಸಭೆಯಲ್ಲಿ ಬರುವ ತೀರ್ಮಾನದಂತೆ ಹೈಕಮಾಂಡ್ ಗೆ ದೂರು ಕೊಡಲು ತೀರ್ಮಾನ ಮಾಡಿದ್ದೇವೆ. ನಮ್ಮ ಜೊತೆ ಸೇರುವವರು ಬಹಳ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಬಿಜೆಪಿಯಲ್ಲಿ ಇಷ್ಟು ಅಸಮಾಧಾನ ಇದೆ ಎಂದು ನನಗೆ ಅನ್ನಿಸಿರಲಿಲ್ಲ.

ಇದನ್ನು ಓದಿ- Muda Scam ಪ್ರತಿಪಕ್ಷಗಳ ಬಾಯಿ ಮುಚ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಡಿ.ಕೆ. ಶಿವಕುಮಾರ್ ಏಜೆಂಟ್ ಆಗಿ ವಿಜಯೇಂದ್ರ ಕೆಲಸ ಮಾಡಿದರು. ಡಿ.ಕೆ. ಶಿವಕುಮಾರ್ ಮುಂದೆ ಫೈಲ್ ಒಯ್ದು ದಯನೀಯವಾಗಿ ನಿಲ್ಲುವ ರಾಜ್ಯಾಧ್ಯಕ್ಷ ಇರುವುದು ಪಕ್ಷಕ್ಕೆ ಶೋಭೆಯಲ್ಲ. ನಾನು ಮಾತಾಡಿದ ಬಳಿಕ ಸತ್ಯ ಮಾತಾಡಿದ್ದೀರಿ, ಮಾತಾಡದೇ ಇದ್ದರೆ ಪಕ್ಷ ಉಳಿಯುವುದಿಲ್ಲ ಎಂದು ಫೋನ್ ಗಳು ಬರುತ್ತಿವೆ. ಬಳ್ಳಾರಿ ಪಾದಯಾತ್ರೆ ಬಗ್ಗೆ ಹೈಕಮಾಂಡ್ ಗೆ ರಮೇಶ್ ಜಾರಕಿಹೊಳಿ ಕೇಳಿಕೊಂಡಿದ್ದಾರೆ. ಹೈಕಮಾಂಡ್ ಅನುಮತಿ ಕೊಟ್ಟರೆ ಪಾದಯಾತ್ರೆ ಮಾಡುತ್ತೇವೆ ಎಂದು ಖಡಕ್​ ಆಗಿ ಕಡ್ಡಿ ಮುರಿದಂತೆ ಹೇಳಿದರು.

ಬಿಜೆಪಿ ಸಮಾನ ಮನಸ್ಕರ ನಾಯಕರ ಸಭೆ

ಇಂದು (ಆಗಸ್ಟ್ 01) ಅನೌಪಚಾರಿಕವಾಗಿ ಯತ್ನಾಳ್ ಮತ್ತು ರಮೇಶ್​ ಜಾರಕಿಹೊಳಿ, ಪ್ರತಾಪ್ ಸಿಂಹ ಸಭೆ ನಡೆಸಿದ್ದು, ಮುಂದಿನ ನಡೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ತಮ್ಮ ಬಣಕ್ಕೆ ಅತೃಪ್ತ ನಾಯಕರನ್ನು ಸೇರಿಸಿಕೊಂಡು ಮುಂದಿನ ದಿನಗಳಲ್ಲಿ ವಿಜಯೇಂದ್ರ ನಾಯಕತ್ವವನ್ನು ಪ್ರಶ್ನಿಸುವ ಚಿಂತನೆ ನಡೆದಿದೆ. ಇದಕ್ಕಾಗಿ ನಾಳೆ(ಆಗಸ್ಟ್ 02) ಸಂಜೆ ಅಥವಾ ನಾಡಿದ್ದು ಬಿಜೆಪಿ ಸಮಾನ ಮನಸ್ಕರ ನಾಯಕರ ಸಭೆ ಕರೆಯಲಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಮುಂದಾಳತ್ವದಲ್ಲಿ ಬೆಂಗಳೂರು ಹೊರವಲಯದಲ್ಲಿ ಈ ಸಮಾನ ವಯಸ್ಕರರ ಸಭೆ ನಡೆಯಲಿದ್ದು, ಮುಂದಿನ ನಡೆ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಸಭೆಯ ಬಳಿಕ ಸಭೆಯ ನಿರ್ಧಾರಗಳು ಅಧಿಕೃತವಾಗಿಯೇ ಪ್ರಕಟಣೆ ಮೂಲಕ ಮಾಹಿತಿ ನೀಡುವ ಸಾಧ್ಯತೆಗಳಿವೆ. ಇನ್ನು ಈ ಸಭೆಯಲ್ಲಿ ಸುಮಾರು ಶೇ.15ರಷ್ಟು ಮುಖಂಡರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮುಖ್ಯವಾಗಿ ಈ ಸಭೆಯ ಬಳಿಕ ಒಂದು ವರದಿ ತಯಾರಿಸಿಕೊಂಡು ಹೈಕಮಾಂಡ್ ಭೇಟಿ ಮಾಡಲು ತೀರ್ಮಾನವಾಗಿದೆ.

ಒಟ್ಟಿನಲ್ಲಿ ಒಂದೆಡೆ ಕಾಂಗ್ರೆಸ್ ಸರ್ಕಾರಕ್ಕೆ ಮುಡಾ ಹಗರಣ (Muda Scam )ಭಯ ಕಾಡುತ್ತಿದ್ದರೆ, ಇತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅತೃಪ್ತ ನಾಯಕರ ಬಣ ಸಿಡಿದೆದ್ದಿದ್ದು, ಹೈಕಮಾಂಡ್​ ಮೊರೆ ಹೋಗಲು ತೀರ್ಮಾನಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಡಾ.ಶಿವರಾಮ ಕಾರಂತ ಲೇಔಟ್​​ನಲ್ಲಿ ನಿವೇಶನಗಳ ಹಂಚಿಕೆ ಕುರಿತಾಗಿ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲು ಸಜ್ಜಾಗುತ್ತಿದೆ ಎಂಬ ಸುದ್ದಿ ಬೆನ್ನಲ್ಲೇ ಶಾಸಕ ಸುರೇಶ್ ಕುಮಾರ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ಕೆಲ ಸಲಹೆಗಳನ್ನು ನೀಡಿದ್ದಾರೆ.

ಭೂ ಮಾಲೀಕರ ಸಮಸ್ಯೆ ಗಮನದಲ್ಲಿಟ್ಟುಕೊಂಡು, ಅವರ ಕುಂದುಕೊರತೆಗಳ ಆದ್ಯತೆ ಮೇರೆಗೆ ಪರಿಗಣಿಸಬೇಕು. ನಂತರ ಶಿವರಾಮ ಕಾರಂತ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ಸಾರ್ವಜನಿಕರಿಂದ ಹಂಚಿಕೆಗಾಗಿ ಅರ್ಜಿ ಕರೆಯುವುದು ಒಳಿತು. ಅರ್ಜಿ ಆಹ್ವಾನಿಸುವ ಮುನ್ನ, ಮೊದಲಿಗೆ ಸಂತ್ರಸ್ತರಿಗೆ ಪರ್ಯಾಯ ನಿವೇಶನ ನೀಡಬೇಕು ಎಂದು ಸುರೇಶ್ ಕಿವಿಮಾತು ಹೇಳಿದ್ದಾರೆ.

ಬನಶಂಕರಿ 6ನೇ ಹಂತ ಬಡಾವಣೆ, BDA ಅರಣ್ಯ ಪ್ರದೇಶದಲ್ಲಿ & ಅರಣ್ಯ ಬಫರ್ ವಲಯದಲ್ಲಿ 2003-2004ರಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಅದರಿಂದ ಈವರೆಗೂ 1500ಕ್ಕೂ ಹೆಚ್ಚು ನಿವೇಶನಗಳ ಮಾಲೀಕರಿಗೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗಿಲ್ಲ.

ಸ್ವಾಧೀನತೆ ಸಂಬಂಧ ವಿವಿಧ ಕೋರ್ಟ್​​​ಗಳಲ್ಲಿ ಹಲವು ದಾವೆಗಳು ಬಾಕಿ ಉಳಿದಿವೆ. ಅಂದಾಜು ಸುಮಾರು 5 ಸಾವಿರಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ಜಮೀನಿನ ನೈಜ ಸ್ವಾಧೀನದಲ್ಲಿಲ್ಲದ ಕಾರಣ ಮನೆಗಳನ್ನು ಕಟ್ಟಿಕೊಳ್ಳಲು ಆಗದೇ ಸಮಸ್ಯೆಗೆ ಸಿಲುಕಿದ್ದಾರೆ. ಹೀಗಾಗಿ ಅರ್ಜಿ ಕರೆಯುವ ಮುನ್ನ ಕುಂದುಕೊರತೆ ಆದ್ಯತೆ ಮೇರೆಗೆ ಪರಿಗಣಿಸಬೇಕು ಎಂದು ಸುರೇಶ್ ತಮ್ಮ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *