Mangalore Flood ತುಂಬಿ ಹರಿಯುತ್ತಿರುವ ಪಾಲ್ಘುನಿ, ನೇತ್ರಾವತಿ ಪ್ರವಾಹ ಭೀತಿ? ವಿದ್ಯುತ್ ತಗುಲಿ ಯುವತಿ ಸಾವು

Mangalore Flood ಗುರುಪುರದಲ್ಲಿ ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಸಾವು

ಅದ್ಯಪಾಡಿಯಲ್ಲಿ ಪ್ರವಾಹ ಭೀತಿ, ಮರವೂರಿನಲ್ಲಿ ನಿರ್ಮಿಸಿದ ಕಿಂಡಿ ಅಣೆಕಟ್ಟು ಪ್ರವಾಕ್ಕೆ ಕಾರಣ

ಬೆಂಗ್ರೆಯ ಹಲವು ಮನೆಗಳು ಜಲಾವೃತ

ಮಂಗಳೂರು, ಜುಲೈ 19(www.kannadadhvani.com )-ಗುರುಪುರ ಅದ್ಯಪಾಡಿ (Adyapadi) ಪ್ರದೇಶದ ಪಾಲ್ಘುನಿ ನದಿ Gurupura River ತೀರದಲ್ಲಿ ಪ್ರವಾಹ ಉಂಟಾಗಿದ್ದು, ಹಲವು ಮನೆಗಳು ಜಲಾವೃತವಾಗಿವೆ. ಬಂಟ್ವಾಳ ನೇತ್ರಾವತಿ ನದಿ ಕೂಡ ಉಕ್ಕಿ ಹರಿಯುತ್ತಿದೆ.

ಪ್ರದೇಶದ 30 ಮನೆಗಳು ಜಲಾವೃತವಾಗಿದ್ದು, ತಗ್ಗಪ್ರದೇಶಗಳಲ್ಲಿ ನೀರು ತುಂಬಿದೆ. ಗುರುಪುರ ನದಿ Gurupura River ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟಕ್ಕಿಂತ ಕೆಳಗಿದೆ.

ಅದ್ಯಪಾಡಿ ಪ್ರವಾಹ ಪೀಡಿತ ಸ್ಥಳಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಮತ್ತು ಜಿಲ್ಲಾ ಪಂಚಾಯತು, ಕಂದಾಯ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು. ಪ್ರವಾಹದ ಬಗ್ಗೆ ಪರಿಶೀಲನೆ ನಡೆಸಿದ್ದು, ಹಲವು ಕುಟುಂಬಗಳನ್ನು ಗಂಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.

Mangalore Flood

ಬಜಪೆ ಸಮೀಪದ ಅದ್ಯಪಾಡಿ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, 80 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಲ್ಗುಣಿ ನದಿಗೆ ಮರವೂರಿನಲ್ಲಿ ನಿರ್ಮಸಿದ ಕಿಂಡಿ ಅಣೆಕಟ್ಟು ಈ ನೆರೆಗೆ ಕಾರಣವಾಗಿದೆ ಎಂದು ಜನರು ಆರೋಪಿಸಿದ್ದಾರೆ.

ಬಜಪೆ ಸಮೀಪದ ಅದ್ಯಪಾಡಿ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, 80 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಲ್ಗುಣಿ ನದಿಗೆ ಮರವೂರಿನಲ್ಲಿ ನಿರ್ಮಿಸಿದ ಕಿಂಡಿ ಅಣೆಕಟ್ಟು ಈ ನೆರೆಗೆ ಕಾರಣವಾಗಿದೆ ಎಂದು ಜನರು ಆರೋಪಿಸಿದ್ದಾರೆ.

ಕಳೆದ ಹತ್ತು ವರ್ಷದಿಂದ ಈ ಗ್ರಾಮದ ಜನರು ಮಳೆಗಾಲದಲ್ಲಿ ಸಂಕಷ್ಟಕ್ಕೆ ಗುರಿಯಾಗುತ್ತಿದ್ದು, ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅವೈಜ್ಞಾನಿಕವಾಗಿ ನಿರ್ಮಿಸಿದ ಕಿಂಡಿ ಅಣೆಕಟ್ಟಿನಿಂದ ಇಲ್ಲಿನ ರೈತರು ಈಗಾಗಲೇ ತಮ್ಮ ಕೃಷಿ ಕಳೆದುಕೊಂಡಿದ್ದಾರೆ. ಪ್ರತಿ ವರ್ಷ ಉಂಟಾಗುವ ನೆರೆಯಿಂದ ಮನೆಗಳೂ ಕುಸಿಯುವ ಭೀತಿ ಎದುರಾಗಿದೆ.

ಅದ್ಯಪಾಡಿ ಗ್ರಾಮಕ್ಕೆ ಇಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿ ಜನರ ಸಂಕಷ್ಟ ಕೇಳಿದ್ದಾರೆ. ದೋಣಿಯ ಮೂಲಕ ಇಲ್ಲಿನ ಮನೆಗಳಿಗೆ ತೆರಳಿದ ಜಿಲ್ಲಾದಿಕಾರಿ ಮನೆಯಲ್ಲಿದ್ದ ವೃದ್ಧರಿಗೆ ಸಾಂತ್ವಾನ ಹೇಳಿದ್ದಾರೆ. ಸುಮಾರು 80 ಜನರು ಇಲ್ಲಿ ವಾಸವಾಗಿದ್ದು, ಜನರನ್ನು ಸ್ಥಳಾಂತರ ಮಾಡಿ ಸುರಕ್ಷಿತ ಜಾಗಕ್ಕೆ ಕಳುಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸ್ಥಳೀಯ ಜನರ ಬಳಿ ಮಾತನಾಡಿದ್ದು, ಅವರು ಪ್ರಮುಖ ಸಮಸ್ಯೆಯ ಬಗ್ಗೆ ಗಮನಕ್ಕೆ ತಂದಿದ್ದಾರೆ. ಆ ಬಗ್ಗೆ ಗಮನ ಹರಿಸಲಾಗುವುದು ಆದ್ರೆ ಅದಕ್ಕೂ ಮೊದಲು ಈಗ ಇವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

ಗುರುಪುರದಲ್ಲಿ ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಅಶ್ವಿನಿ ಶೆಟ್ಟಿ (21) ಎಂಬ ಯುವತಿ ಮೃತರಾಗಿದ್ದಾರೆ. ಇವರು ಸಿಎ ವಿದ್ಯಾರ್ಥಿನಿಯಾಗಿದ್ದರು.

ನೇತ್ರಾವತಿ ನದಿಯ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ಬಂಟ್ವಾಳದ ಹಲವೆಡೆ ಜಲಾವೃತವಾಗಿದೆ. ಹಲವೆಡೆ ನೀರು ರಸ್ತೆಗೆ ನುಗ್ಗಿದೆ.Mangalore Flood

Mangalore Flood  ಬಂಟ್ವಾಳ ಪ್ರವಾಹ

ಜಕ್ರಿಬೆಟ್ಟು ಮತ್ತು ಬಂಟ್ವಾಳ (Bantwal Flood) ಪೇಟೆಗೆ ಸಂಪರ್ಕ ಕಲ್ಪಿಸುವ ರಾಯರ ಚಾವಡಿ ರಸ್ತೆ ಜಲಾವೃತಗೊಂಡಿದ್ದು, ಅಜಿಲಮೊಗರು ಮಸೀದಿ ಮುಂಭಾಗದ ರಸ್ತೆಯೂ ಜಲಾವೃತಗೊಂಡಿದ್ದು, ಅಜಿಲಮೊಗರು ಮತ್ತು ಉಪ್ಪಿನಂಗಡಿ ನಡುವಿನ ಸಂಪರ್ಕ ಕಡಿತಗೊಂಡಿದೆ.

Mangalore Flood ದಾರಿ ಯಾವುದಾಯ್ಯ ಮಂಗಳೂರಿಗೆ ?

 

ಹಲವಾರು ಹೊಲಗಳು ಮತ್ತು ತೋಟಗಳು ಜಲಾವೃತವಾಗಿವೆ. ಪಾಣೆಮಂಗಳೂರಿನ ಆಲಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ.

ನೇತ್ರಾವತಿ ನದಿಯ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ಬಂಟ್ವಾಳದ ಹಲವೆಡೆ ಜಲಾವೃತವಾಗಿದೆ. ಹಲವೆಡೆ ನೀರು ರಸ್ತೆಗೆ ನುಗ್ಗಿದೆ. ಹಲವಾರು ಹೊಲಗಳು ಮತ್ತು ತೋಟಗಳು ಜಲಾವೃತವಾಗಿವೆ. ಪಾಣೆಮಂಗಳೂರಿನ ಆಲಡ್ಕದಲ್ಲಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ.

Mangalore Flood  ಬೆಂಗ್ರೆಯಲ್ಲಿ ಪ್ರವಾಹ

ಮಂಗಳೂರಿನ ಬೆಂಗ್ರೆಯ ಜನರೂ ಕೂಡಾ ಅಂತಹದೇ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನ ಕೋಸ್ಟಲ್‌ ಬರ್ತ್‌ ಕಾಮಗಾರಿಯಿಂದ ಉಂಟಾಗಿರುವ ಕೃತಕ ನೆರೆಯಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಮಂಗಳೂರಿನ ಕಸಬಾ ಬೆಂಗ್ರೆ ಪ್ರದೇಶದ ನದಿ ತೀರದ ಕೆಲವು ಭಾಗಗಳಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಇನ್ನೊಂದೆಡೆ ಸಾಗರಮಾಲ ಯೋಜನೆಯ ಕೋಸ್ಟಲ್ ಬರ್ತ್ ಕಾಮಗಾರಿಯ ಕೆಳಭಾಗದಲ್ಲಿರುವ ತಗ್ಗು ಪ್ರದೇಶದ ಮನೆಗಳಿಗೆ ಅದೇರೀತಿ ಸಹರಾ ಶಾಲೆಯ ಆವರಣಗೋಡೆಯ ಒಳಭಾಗಗಳಲ್ಲಿ ಮಳೆಹೆಚ್ಚು ಬಂದಾಗೆಲ್ಲಾ ಮಳೆ ನೀರುನಿಲ್ಲುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋಸ್ಟಲ್‌ ಬರ್ತ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ನದಿ ನೀರು ಸರಿಯಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಕಳೆದ ಕೆಲ ದಿನದಿಂದ ಸುರಿಯುತ್ತಿರುವ ಮಳೆಗೆ ಬೆಂಗ್ರೆಯ ಹಲವು ಮನೆಗಳು ಜಲಾವೃತಗೊಂಡಿದೆ. ಶಾಲೆಗಳಿಗೂ ನದಿ ನೀರು ನುಗ್ಗಿದ್ದು, ತೀರದಲ್ಲಿದ್ದ ಮೀನುಗಾರರ ದೋಣಿಗಳನ್ನು ಕಟ್ಟಿ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೆಲ ದಿನಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ ಅಧಿಕಾರಿ ಶೀಘೃ ಸಮಸ್ಯೆ ಬಗೆ ಹರಿಸುವ ಬರವಸೆ ನೀಡಿದ್ದರು. ಶಾಲೆಯ ಆವರಣಕ್ಕೆ ಮರಳು ಹಾಕಿ ನೀರು ಬಾರದಂತೆ ತಡೆಯುವುದಾಗಿ ಹೇಳಿದ್ದರು. ಆದ್ರೆ ನಿನ್ನೆ ತುಂಬೆ ಅಣೆಕಟ್ಟು ತುಂಬಿದ ಕಾರಣ ಎಲ್ಲಾ ಗೇಟ್‌ಗಳನ್ನು ತೆಗೆದಿರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದ ಕೋಸ್ಟಲ್‌ ಬರ್ತ್‌ ನಿರ್ಮಾಣದ ಪ್ರದೇಶದಲ್ಲಿ ನೀರು ಸರಾಗವಾಗಿ ಹರಿಯದೇ ಬೆಂಗ್ರೆ ಪರಿಸರದ ಮನೆಗಳಿಗೆ ಹಾಗೂ ಶಾಲೆಗಳಿಗೆ ನುಗ್ಗಿದೆ. ಹೀಗಾಗಿ ತಕ್ಷಣ ಬರ್ತ್ ನಿರ್ಮಾಣ ಕಾಮಗಾರಿಯನ್ನು ತಡೆಹಿಡಿಯುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.

ಈ ವರ್ಷ ವಾಡಿಕೆಗಿಂತ ಅಧಿಕ ಮಳೆಯಾಗುತ್ತಿದ್ದು, ಮಲೆನಾಡು ಕರಾವಳಿ ಭಾಗದ ಹಲವು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಉತ್ತರ ಕನ್ನಡ, ಕೊಡಗು, ಮಂಗಳೂರು, ಉಡುಪಿ, ಚಿಕ್ಕಮಗಳೂರು ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾಂ ಹಾಗೂ ದಾವಣಗೆರೆ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ.

ಈ ಬಗ್ಗೆ ಶುಕ್ರವಾರ ವಿಕಾಸಸೌಧದಲ್ಲಿ ಸಭೆ ನಡೆಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಸಿಇಓ ಗಳು ಹಾಗೂ ನೀರಾವರಿ, ಇಂಧನ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಅಂಕೋಲಾ ಭೂ ಕುಸಿತ ಅವಘಡದಲ್ಲಿ ಮೃತಪಟ್ಟ ಎಲ್ಲಾ ಏಳು ಜನರ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. ಅಲ್ಲದೆ, ನದಿನೀರಿನಲ್ಲಿ ಕೊಚ್ಚಿಹೋಗಿದ್ದ ಎಲ್‌ಪಿಜಿ ಗ್ಯಾಸ್‌ ಟ್ಯಾಂಕರ್‌ ಅನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣ ಭೂ ಕುಸಿತ ಉಂಟಾಗಿದ್ದು, ಕೆಲವು ಭಾಗಗಳಲ್ಲಿ ಅಗತ್ಯ ವಸ್ತುಗಳ ವಾಹನ ಮಾತ್ರ ಓಡಾಡಲು ಸಿದ್ದತೆ ಮಾಡಲಾಗಿದೆ.

ಈಗಾಗಲೇ ಟಾಸ್ಕ್‌ಫೋರ್ಸ್‌ ರಚಿಸಲಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಟಾಸ್ಕ್‌ಫೋರ್ಸ್‌ ಫೀಲ್ಡಿಗೆ ಇಳಿದು ಕೆಲಸ ಮಾಡುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿ ಹಾಗೂ ವಿಪತ್ತು ನಿರ್ವಹಣೆ ಇಲಾಖೆ ಒಟ್ಟಾಗಿ ಕಂಟ್ರೋಲ್‌ ರೂಂ ತೆರೆದಿತ್ತು ಜನರ ಸಹಾಯಕ್ಕೆ ಮುಂದಾಗಿದೆ.

ಘಟ್ಟ ಪ್ರದೇಶದಲ್ಲಿ ಸುರಿಯುುತ್ತಿರುವ ಬಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದೆ. ಕಡಬದ ಮಡಿಪು-ಬರೆಮೇಲು ರಸ್ತೆ ಸಂಪರ್ಕ ಕಡಿತವಾಗಿದೆ.

ರಸ್ತೆಗೆ ಬಂದ ಗುಂಡ್ಯ ಹೊಳೆಯ ನೀರು ಬಂದಿದ್ದುಸ ಕಡಬದ ಮಡಿಪು-ಬರೆಮೇಲು ರಸ್ತೆ ಸಂಪರ್ಕ ಕಡಿತವಾಗಿದೆ. ಉಳ್ಳಾಕ್ಲು ದೈವಸ್ಥಾನ ಮತ್ತು ನದಿಬದಿಯ. ಕೃಷಿ ತೋಟಗಳು ಜಲಾವೃತವಾಗಿದೆ.ರಸ್ತೆಗೆ ಬಂದ ಗುಂಡ್ಯ ಹೊಳೆಯ ನೀರು ಬಂದಿದ್ದುಸ ಕಡಬದ ಮಡಿಪು-ಬರೆಮೇಲು ರಸ್ತೆ ಸಂಪರ್ಕ ಕಡಿತವಾಗಿದೆ. ಉಳ್ಳಾಕ್ಲು ದೈವಸ್ಥಾನ ಮತ್ತು ನದಿಬದಿಯ. ಕೃಷಿ ತೋಟಗಳು ಜಲಾವೃತವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ.ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ ನೀರು 29.1 ಮೀಟರ್‌ವರೆಗೆ ತಲುಪಿದೆ. ಶಂಭೂರು ಬಳಿ ಎಎಂಆರ್ ಅಣೆಕಟ್ಟೆ ಬಳಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, 18.9 ಮೀಟರ್ ವರೆಗೂ ನೀರಿನ ಮಟ್ಟ ತಲುಪಿದೆ.

ಈ ಅಣೆಕಟ್ಟೆಯ ಎಲ್ಲ ಗೇಟುಗಳನ್ನು ತೆರೆಯಲಾಗಿದೆ. ಬಂಟ್ವಾಳದ ಪಾಣೆಮಂಗಳೂರು ಆಲಡ್ಕದಲ್ಲಿ ಮನೆಗಳಿಗೆ ನೇತ್ರಾವತಿ ನದಿ ನೀರು ನುಗ್ಗಿದೆ. ಸುಮಾರು 12 ಮನೆಗಳಿಗೆ ನುಗ್ಗಿದ್ದ ನೇತ್ರಾವತಿ ನದಿ ನೀರು ನುಗ್ಗಿದ್ದು, 12 ಮನೆಗಳ ಜನರನ್ನ ಸ್ಥಳಾಂತರ ಮಾಡಲಾಗಿದೆ. ಅಲ್ಲದೆ ಜನರಿನ್ನು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

7 ಮೀ ಎತ್ತರದಷ್ಟು ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ತುಂಬೆ ಅಣೆಕಟ್ಟೆಯಲ್ಲಿ ಸದ್ಯಕ್ಕೆ 6 ಮೀ ವರೆಗೆ ಮಾತ್ರ ನೀರು ಸಂಗ್ರಹಿಸಲಾಗುತ್ತದೆ.‌ ಈ ಅಣೆಕಟ್ಟೆಯ ಎಲ್ಲ 30 ಗೇಟ್‌ಗಳನ್ನು ತೆರೆಯಲಾಗಿದೆ.
ಗುರುವಾರ ಬೆಳಿಗ್ಗೆಯಿಂದಲೂ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು ಬಿಟ್ಟು ಬಿಟ್ಟು ಧಾರಾಕಾರ ಮಳೆಯಾಗುತ್ತಿದೆ. ಜಿಲ್ಲೆಯ ಇತರ ಪ್ರಮುಖ ನದಿಗಳಾದ ಕುಮಾರಧಾರಾ, ಫಲ್ಗುಣಿ, ನಂದಿನಿ, ಶಾಂಭವಿ ನದಿಗಳು ಕೂಡ ತುಂಬಿ ಹರಿಯುತ್ತಿವೆ

 

One Comment on “Mangalore Flood ತುಂಬಿ ಹರಿಯುತ್ತಿರುವ ಪಾಲ್ಘುನಿ, ನೇತ್ರಾವತಿ ಪ್ರವಾಹ ಭೀತಿ? ವಿದ್ಯುತ್ ತಗುಲಿ ಯುವತಿ ಸಾವು”

Leave a Reply

Your email address will not be published. Required fields are marked *