Karnataka High Court Raps Cops Over “Extortion” Charge; ರಿಯಲ್ ಎಸ್ಟೇಟ್ ಕೇಸುಗಳಲ್ಲಿ ವಸೂಲಿ ದಂಧೆ ನಡೆಸುತ್ತಿರುವ ಪೊಲೀಸರು

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ (Police Station)ಸಿವಿಲ್‌ ವ್ಯಾಜ್ಯಗಳನ್ನು (civil disputes) ಸೆಟಲ್‌ಮೆಂಟ್‌ (Settlement) ಮಾಡುವ ಪೊಲೀಸರ (Police) ಪ್ರವೃತ್ತಿಯನ್ನು ಮತ್ತೊಮ್ಮೆ ಕಟುವಾಗಿ ಟೀಕಿಸಿರುವ (High Court)ಹೈಕೋರ್ಟ್‌, ಠಾಣೆಗಳು ರಿಯಲ್‌ ಎಸ್ಟೇಟ್‌ Real Estate ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ ಎಂದು ಖಾರವಾಗಿ ನುಡಿದಿದೆ.

ಈ ಬಗ್ಗೆ ಕೋರ್ಟ್ ಪದೇ ಪದೇ ಸೂಚನೆ ನೀಡುತ್ತಿದ್ದರೂ ಪೊಲೀಸ್ ಠಾಣೆಗಳು ಮಾತ್ರ ಕಾನೂನು ಉಲ್ಲಂಘಿಸುತ್ತಲೇ ಇವೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

‘ಖಾಸಗಿ ವ್ಯಕ್ತಿಗಳು ನನ್ನಿಂದ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದು, ಅದಕ್ಕೆ ಬಾಣಸವಾಡಿ ಠಾಣಾ ಪೊಲೀಸರು ನೆರವು ನೀಡುತ್ತಿದ್ದಾರೆ’ ಎಂದು ಆರೋಪಿಸಿ ನಗರದ ಗೆದ್ದಲಹಳ್ಳಿ ನಿವಾಸಿ ಜುವಿತ್ತಾ ರವಿ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ ಹೀಗೆ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸರಿಂದ ಕಿರುಕುಳ ಆರೋಪ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಸಿವಿಲ್‌ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರರಿಗೆ ಪೊಲೀಸರು ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ,’ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌, ಠಾಣೆಗಳು ರಿಯಲ್‌ ಎಸ್ಟೇಟ್‌ ವ್ಯವಹಾರಸ್ಥರ ಸೆಟಲ್‌ಮೆಂಟ್‌ ಮಾಡುವ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಸಿವಿಲ್‌ ವ್ಯಾಜ್ಯಗಳಲ್ಲಿ ಮಧ್ಯಪ್ರವೇಶ ಮಾಡದಂತೆ ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ ಪದೇ ಪದೇ ಆದೇಶಿಸಿದ್ದರೂ ಪೊಲೀಸರು ಮಾತ್ರ ಅದನ್ನು ಉಲ್ಲಂಘಿಸುತ್ತಲೇ ಇದ್ದಾರೆ” ಎಂದು ಅಸಮಾಧಾನ ಹೊರಹಾಕಿತು.

ಅಲ್ಲದೆ, ಪ್ರಕರಣ ಕುರಿತಂತೆ ಬಾಣಸವಾಡಿ ಸಹಾಯಕ ಪೊಲೀಸ್‌ ಆಯುಕ್ತರು ನವೆಂಬರ್ 29ರಂದು ಮಧ್ಯಾಹ್ನ 2.30ಕ್ಕೆ ಕೋರ್ಟ್‌ಗೆ ಖುದ್ದು ಹಾಜರಾಗಿ ವಿವರಣೆ ನೀಡಬೇಕು, ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

12 ಲಕ್ಷ ಹಣ ವಸೂಲಿಗೆ ಯತ್ನ

ಕೆಲ ಖಾಸಗಿ ವ್ಯಕ್ತಿಗಳು ನನ್ನಿಂದ 12 ಲಕ್ಷ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸರು 2023ರ ನವೆಂಬರ್ 21ರಂದು ಠಾಣೆಗೆ ಕರೆದೊಯ್ದು ಹಣ ಪಾವತಿಸಲು ಸೂಚಿಸುತ್ತಿದ್ದರು. ನವೆಂಬರ್ 25ರಂದು ಚೆಕ್‌ ಸಮೇತ ಠಾಣೆಗೆ ಹಾಜರಾಗಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಕೋರ್ಟ್ನನಲ್ಲಿ ಆಗಬೇಕಾದ ಕಾರ್ಯವನ್ನು ಪೊಲೀಸರೇ ಮುಂದಾಳತ್ವ ವಹಿಸಿ ಮಾಡುತ್ತಿದ್ದಾರೆ. ಇದು ಗಂಭೀರ ಪ್ರಕರಣವಾಗಿದ್ದು, ಪೊಲೀಸರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.

ಸಿವಿಲ್‌ ಹಾಗೂ ಹಣಕಾಸಿಗೆ ಸಂಬಂಧಿಸಿದ ಪ್ರಕರಣಗಳನ್ನು ಠಾಣೆಯಲ್ಲಿ ಸೆಟಲ್‌ಮೆಂಟ್‌ ಮಾಡುವ ಪೋಲೀಸರ ಕಾರ್ಯವೈಖರಿಯಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತಿದೆ. ಆದ್ದರಿಂದ ಪ್ರಕರಣ ಸಂಬಂಧ ಅರ್ಜಿದಾರರು ನವೆಂಬರ್ 22ರಂದು ನೀಡಿರುವ ಮಾಹಿತಿ ಪರಿಗಣಿಸಿ, ಕಾನೂನು ಪ್ರಕಾರ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರ ಮತ್ತು ನಗರ ಪೊಲೀಸ್‌ ಆಯುಕ್ತರಿಗೆ ನಿರ್ದೇಶಿಸಬೇಕು, ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

 

ಅರ್ಜಿ ಇತ್ಯರ್ಥವಾಗುವರೆಗೆ ಅರ್ಜಿದಾರರರು ಅಥವಾ ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.

the High Court pointed out that despite orders preventing police involvement in civil and financial matters, police stations have transformed into centres for ‘settlement’ in real estate transactions.

 

 

Leave a Reply

Your email address will not be published. Required fields are marked *