PSI Scam ನ್ಯಾಯಮೂರ್ತಿ ವೀರಪ್ಪ ಆಯೋಗ ವರದಿ ಸಲ್ಲಿಕೆ

commission Report

 

PSI Scam  ಬೆಂಗಳೂರು, ಜ.22- ಪೊಲೀಸ್ ಸಬ್ ಇನ್ಸ ಪೆಕ್ಟರ್ (ಪಿ.ಎಸ್ ಐ.) ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು(commission Report) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರುಗಳು ಉಪಸ್ಥಿತರಿದ್ದರು.

2021 ಅಕ್ಟೋಬರ್ 3 ರಂದು 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಲಾಗಿತ್ತು.
ಬೆಂಗಳೂರು ನಗರ, ಕಲಬುರಗಿ, ಹುಬ್ಬಳ್ಳಿ- ಧಾರವಾಡ ನಗರ, ತುಮಕೂರು ನಗರ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದವು.

ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1ರಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್, ಇತರೆ ಎಲೆಕ್ಟ್ರಾನಿಕ್ ಸಾಧನ ಬಳಸಿ ಅಕ್ರಮ ಎಸಗಿದ್ದು ಬೆಳಕಿಗೆ ಬಂದಿತ್ತು. ಕೆಲವು ಅಭ್ಯರ್ಥಿಗಳು ಓಎಂಆರ್ ಶೀಟ್‌ಗಳನ್ನೇ ತಿದ್ದುಪಡಿ ಮಾಡಿಸಿಕೊಂಡಿರುವುದು ದೃಢವಾಗಿದ್ದರಿಂದ ಅಂಥಹ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.

ಈ ಕುರಿತು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ಕಮಲ್ ಪಂತ್ 2023ರಲ್ಲಿ ಆದೇಶ ಹೊರಡಿಸಿದ್ದರು.
2021 ಅಕ್ಟೋಬರ್ 3 ರಂದು 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಲಾಗಿತ್ತು.

ಅನಂತರ ಸರಕಾರದ ಹಗರಣದ ಗಂಧಬರತೆಯನ್ನು ತಿಳಿದುಕೊಂಡು ಪ್ರಕರಣದ ಸಮಗ್ರ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗ (commission Report) ನೇಮಕ ಮಾಡಿತ್ತು. ಇಂದು ಆಯೋಗ ವರದಿಯನ್ನು ಸರಕಾರಕ್ಕೆ ನೀಡಿದೆ. ಸರಕಾರ ಮುಂದಿನ ಕ್ರಮಕೈಗೊಳ್ಳಬೇಕಾಗಿದೆ.

Leave a Reply

Your email address will not be published. Required fields are marked *