ಬೆಂಗಳೂರು, ಸೆಪ್ಟೆಂಬರ್ 28: Sugar Factory ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ Sugar Factory ಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಅವರು ಇಂದು ಮುಧೋಳ ತಾಲ್ಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023- 24 ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.
ಕಬ್ಬು ಅರೆಯುವ ಕಾರ್ಯ ಪ್ರಾರಂಭ ವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ದವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಹಿರೇಮಠ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ , ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತ ರವಿಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯ ರನ್ನ ಸಹಕಾರಿ Sugar Factory ಸಕ್ಕರೆ ಕಾರ್ಖಾನೆ ಆರಂಭಿಸಲು ಸರಕಾರ ಲೀಸ್ ಮಾರ್ಗ ಅುಸರಿಸಿರುವುದುಸ್ವಾಗತಾರ್ಹ ನಡೆಯಾಗಿದೆ. ಈಗಾಗಲೇ, ಬ್ಯಾಂಕುಗಳಿಂದ ಪಡೆದ ಸಾಲವನ್ನು ಹಿಂತಿರುಗಿಸುವ ಕ್ರಮ ನಡೆದಿದ್ದು, ಉದ್ಯೋಗಿಗಳ ವೇತನ ಬಾಕಿ ಚುಕ್ತ ಮಾಡಬೇಕಾಗಿದೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ತಿಮ್ಮಾಪೂರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ವರ್ಷದ ಕಬ್ಬಿನ ಹಂಗಾಮು ಆರಂಭಿಸುವ ನಿರ್ಧಾರದಿಂದ ಸರಕಾರದ ಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.
ಕಾರ್ಖಾನೆಯ ನೌಕರರ, ಕಾರ್ಮಿಕರ ನಾನಾ ಬೇಡಿಕೆಗಳಿವೆ. ಕಾಯಂ 255, ಹಂಗಾಮಿ 152 ಹಾಗೂ ದಿನಗೂಲಿ 114 ಕಾರ್ಮಿಕರು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಾತ್ಕಾಲಿಕವಾಗಿ 12 ತಿಂಗಳ ಸಂಬಳ ಪಾವತಿಯಾಗಬೇಕು. ಸಂಬಳ ಪಾವತಿಯಾದ ಬಳಿಕ ವಿವಿಧ ವೇತನ ಶ್ರೇಣಿಗಳ ಬದಲಾವಣಿಯಾಗಬೇಕೆಂಬ ಬೇಡಿಕೆಗಳಿವೆ.
AIDS HIV: ಏಡ್ಸ್ ರೋಗ ಸೋಂಕಿತರಲ್ಲಿ ಕರ್ನಾಟಕ 9ನೇ ಸ್ಥಾನ ! ಏಡ್ಸ್ ಹರಡುವಿಕೆ ಇಳಿಕೆ
‘ಕಾರ್ಖಾನೆ ಮರು ಆರಂಭಿಸುವ ಸಲುವಾಗಿ ಅ. 26 ರ ಒಳಗೆ ಟೆಂಡರ್ ಪ್ರಕ್ರಿಯೆ ಕೊನೆಯ ಹಂತಕ್ಕೆ ಬಂದು ತಲುಪಲಿದೆ. ದೀಪಾವಳಿಯೊಳಗೆ ಕಾರ್ಖಾನೆ ಕೆಲಸಕ್ಕೆ ಹಾಜರಾಗಲು ಸಚಿವರು ಸೂಚಿಸಿದ್ದಾರೆ. ಆರಂಭದಲ್ಲಿ ಟೆಂಡರ್ ಪಡೆಯಲಿರುವ ಸಂಸ್ಥೆ 5 ಕೋಟಿ ರೂ. ಸಂಬಳ ಕೊಡಲು ಸಚಿವರು ಸೂಚಿಸಲಿದ್ದಾರೆ ಎನ್ನಲಾಗಿದೆ. ಆಡಳಿತ ಮಂಡಳಿ ಹಾಗೂ ಡಿಸಿಯವರ ಜತೆ ಒಂದು ಸುತ್ತಿನ ಮಾತುಕತೆ ನಡೆಯಲಿದೆ.