Shettar joins BJP ಕಾಂಗ್ರೆಸ್ಸಿಗೆ ರಾಜೀನಾಮೆ ಕೊಡದೇ ಬಿಜೆಪಿ ಸೇರಿದ ಶೆಟ್ಟರ್

Shettar joins BJP ಹೊಸದಿಲ್ಲಿ, ಜ25-  ಕಾಂಗ್ರೆಸ್ ಪಕ್ಷ (Congress)ವಿಧಾನಪರಿಷತ್ ಸದಸ್ಯ ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ್  ಅವರು ಶಾಸಕ ಸ್ಥಾನಕ್ಕು (MLC) ರಾಜಿನಾಮೆ ನೀಡದೆ ಕಾಂಗ್ರೆಸ್ ಪಕ್ಷಕ್ಕು ರಾಜಿನಾಮ ನೀಡದೆ ಭಾರತೀಯ ಜನತಾ ಪಾರ್ಟಿ ಸೇರಿದ್ದು, ವಿಧಾನಪರಿಷತ್ತಿನ ಸಭಾಕ್ಷಕರು (Speaker) ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬ ಕುತೂಹಲ ಮೂಡಿಸಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್  ಅವರು ದೆಹಲಿಯಲ್ಲಿ ರಾಜ್ಯದ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಇಂದು ದೆಹಲಿಯಲ್ಲಿ ಅಪರಾಹ್ನ  ಜಗದೀಶ್ ಶೆಟ್ಟರ್ ಅವರು ಬಿಜೆಪಿ ಹೈಕಮಾಂಡ್ ಅಮಿತ್‌ ಶಾ ಅವರನ್ನು ಭೇಟಿ ಮಾಡಿದರು.  ಅನಂತರ ಬಿಜೆಪಿಗೆ ಸೇರ್ಪಡೆ ಆಗುವ ಬಗ್ಗೆ ಒಪ್ಪಿಕೊಂಡು ಬಿಜೆಪಿಗೆ ಮರು ಸೇರ್ಪಡೆ ಆಗಿದ್ದಾರೆ. ಶೆಟ್ಟರ್ ತಮ್ಮ ಆಪ್ತ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ‌ ಜೊತೆ ದೆಹಲಿ ಆಗಮಿಸಿದ್ದರು,  ಅಲ್ಲಿ ಬಿಜೆಪಿ ಸೇರ್ಪಡೆಗೆ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೂ ಕೂಡ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದು, ಶೆಟ್ಟರ್ ಅವರ ಬಿಜೆಪಿ ಸೇರ್ಪಡೆಯ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆಗೆ ಮುನ್ನ  ಜಗದೀಶ್ ಶೆಟ್ಟರ್‌ ಮರಳಿ ಕರೆತರಲು ಬಿಜೆಪಿ ನಾಯಕರು ನಡೆಸಿರುವ  ಪ್ರಯತ್ನ ಯಶಸ್ವಿಯಾಗಿದೆ. ಶೆಟ್ಟರ್ ಅಲ್ಲದೆ ಇನ್ನಿತರ ನಾಯಕರನ್ನು ಕರೆ ತರುವ ಸಾಧ್ಯತೆ ಇದೆ.

ವಿಧಾನಸಭಾ ಚುನಾವಣಾ ವೇಳೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್ ಧಾರವಾಡದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು. ನಂತರ ಅವರನ್ನು ಕಾಂಗ್ರೆಸ್‌ನಿಂದ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿದ್ದರೂ, ಸೂಕ್ತ ಸ್ಥಾನಮಾನ ಮತ್ತು ಗೌರವಗಳನ್ನು ಕೊಡದೇ ನಡೆಸಿಕೊಳ್ಳಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ಘಾಸಿಗೊಳಗಾದ ಜಗದೀಶ್ ಶೆಟ್ಟರ್ ಅವರ ಮನಸ್ಸು ಮಾತ್ರ ಬಿಜೆಪಿಗೆ ವಾಪಸ್ ಬರಲು ಹವಣಿಸುತ್ತಿತ್ತು. ಇನ್ನು ಅವರ ಶಿಷ್ಯ ಶಂಕರ್ ಪಾಟೀಲ್ ಮುನೇನಕೊಪ್ಪ ಮಧ್ಯಸ್ಥಿಕೆಯಲ್ಲಿ ಹೈಕಮಾಂಡ್‌ನೊಂದಿಗೆ ಚರ್ಚಿಸಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದಾರೆ. ಬಿಜೆಪಿ ಕಚೇರಿಗೆ ಭೇಟಿ ನೀಡಿದ  ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆ ಆಗಿದ್ದಾರೆ.

ಬೆಂಗಳೂರು ಸೀತಾರಾಮ ಲಕ್ಷ್ಮಣ ದೇವಾಲಯ ಉದ್ಘಾಟಿಸಿದ ಸಿದ್ದರಾಮಯ್

 

Leave a Reply

Your email address will not be published. Required fields are marked *