Ship Sunk : ಹೈಕೋರ್ಟಿಗೆ ವರದಿ ನೀಡಲಿರುವ ಜಿಲ್ಲಾಧಿಕಾರಿ

sunk ship

Bharat Jodo Yatra: ಡಿಸಂಬರಿನಲ್ಲಿ 2 ನೇ ಹಂತದ ಭಾರತ್​ ಜೋಡೋ ಯಾತ್ರೆShip Sunk ಉಳ್ಳಾಲ (Ullala) ಸಮೀಪ ಅರಬ್ಬೀ ಸಮುದ್ರದಲ್ಲಿ (Arebian Sea) ಮುಳುಗಡೆ ಆಗಿರುವ ವಿದೇಶಿ ಹಡಗಿನ Merchant Vesselಅವಶೇಷಗಳನ್ನು ಪರಿಶೀಲನೆ ನಡೆಸಿದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕರ್ನಾಟಕ ಹೈಕೋರ್ಟಿಗೆ ವರದಿ ನೀಡಲಿದ್ದಾರೆ.

ಮಂಗಳೂರು ಡಿ.21:  ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಬೆಟ್ಟಂಪಾಡಿ ಸಮೀಪ ಅರಬ್ಬೀ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಪಾಯಕ್ಕೆ ಸಿಲುಕಿ ಮುಳುಗಡೆಯಾಗಿದ್ದ ವಿದೇಶಿ ಹಡಗು ಎಂ.ವಿ.( Merchant Vessel)ಪ್ರಿನ್ಸಸ್ ಮಿರಾಲ್ (mv princess miral) ಹಡಗಿನ ಅವಶೇಷಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಪರಿಶೀಲನೆ ನಡೆಸಿದ್ದಾರೆ.

ಉಳ್ಳಾಲ ಸಮೀಪ ಅರಬ್ಬೀ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಪಾಯಕ್ಕೆ ಸಿಲುಕಿ ಎಂ.ವಿ.ಪ್ರಿನ್ಸಸ್ ಮಿರಾಲ್ Merchant Vessel ವಿದೇಶಿ ಹಡಗು ಸಮುದ್ರದಲ್ಲಿ ಮುಳುಗಡೆಯಾಗಿತ್ತು. ಹಡಗಿನ ಅವಶೇಷಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರ ಮುಲ್ಲೈ ಮುಹಿಲನ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ತಜ್ಞರು ಒಳಗೊಂಡ ತಂಡ ಸಮುದ್ರಕ್ಕೆ ತೆರಳಿ ಪರಿಶೀಲನೆ ನಡೆಸಿದೆ.

ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ ಅಧಿಕಾರಿಗಳು ಈ ಹಡಗಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ವಿಪತ್ತು ನಿರ್ವಹಣಾ ಘಟಕ, ಮೀನುಗಾರಿಕಾ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಮೀನುಗಾರರ ಮುಖಂಡರು ಒಳಗೊಂಡ ತಂಡ ಮುಳುಗಡೆಯಾದ ಹಡಗಿನ ಬಳಿಗೆ ದೋಣಿಯಲ್ಲಿ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಯುಎಇ ಗೆ ಸೇರಿದ ಮೊಂಜಾಸ ಡಿಎಂಸಿಸಿ ಎಂಬ ಕಂಪೆನಿಯು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ತನಗೆ ಶಿಪ್ ಬಂಕರಿಂಗ್ ತೈಲ ಪೂರೈಕೆ ಮಾಡಿದಕ್ಕೆ 1.39ಕೋಟಿ ರೂಪಾಯಿ ಬಾಕಿ ಬರಬೇಕಾಗಿದ್ದು ಶಿಪಿಂಗ್ ಕಂಪೆನಿಯಿಂದ ಇದುವರೆಗೂ ಹಣ ಪಾವತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಬಾಕಿ ಹಣ ಬರುವವರೆಗೂ ಪ್ರಿನ್ಸೆಸ್ ಮಿರಾಲ್ ಹಡಗನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು ಹಡಗಿನ ಬಿಡಿಭಾಗಗಳನ್ನು ಮಾರಾಟ ಮಾಡಿಸಿ ಅದರಿಂದ ಬರುವ ಮೊತ್ತದಿಂದ ತನ್ನ ನಷ್ಟವನ್ನು ಭರಿಸುವಂತೆ ಆದೇಶಿಸಬೇಕು ಎಂದು ಕೇಳಿಕೊಂಡಿತ್ತು. ಅದರಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ನವೆಂಬರ್ ತಿಂಗಳಿನಲ್ಲಿ ಆದೇಶ ನೀಡಿ ಹಡಗನ್ನು ಮುಟ್ಟುಗೋಲು ಹಾಕುವಂತೆ ನವಮಂಗಳೂರು ಬಂದರೂ ಪ್ರಾಧಿಕಾರಕ್ಕೆ ಆದೇಶ ನೀಡಿತ್ತು.

ಆದ್ರೆ ನೌಕೆ ಮುಳುಗಡೆಯಾದ ಪ್ರದೇಶ ತನ್ನ ವ್ಯಾಪ್ತಿಯಲ್ಲಿಲ್ಲ ಬದಲಾಗಿ ರಾಜ್ಯ ಸರಕಾರದ ಅಧೀನ ವ್ಯಾಪ್ತಿಯ ಹಳೇ ಬಂದರು ಪ್ರದೇಶಕ್ಕೆ ಸೇರಿದ್ದಾಗಿ ಮತ್ತು ಜಿಲ್ಲಾಡಳಿತ ಈ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೈಕೋರ್ಟಿಗೆ ಎನ್‌ಎಂಪಿಎ NMPA ಮನವರಿಕೆ ಮಾಡಿತ್ತು. ಇದೀಗ ಹಡಗು ಮುಟ್ಟುಗೋಲು ಹಾಕಲು ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಇತರ ಅಧಿಕಾರಿಗಳು, ತಜ್ಞರು ಒಳಗೊಂಡ ಜಿಲ್ಲಾಧಿಕಾರಿ ನೇತೃತ್ವದ ತಂಡ ಸಮುದ್ರಕ್ಕೆ ತೆರಳಿ ಮುಳುಗಡೆಯಾಗಿದ್ದ ಎಂ ವಿ ಪ್ರಿನ್ಸೆಸ್ ಮಿರಾಲ್ ಹಡಗಿನ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಮಾಹಿತಿಗಳ ಪ್ರಕಾರ ಪ್ರಸ್ತುತ ಹಡಗಿನ ಸ್ಥಿತಿಗತಿಗಳ ಬಗ್ಗೆ ಹೈಕೋರ್ಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವರದಿ ಸಲ್ಲಿಸಲಿದೆ.sunk ship

ಮಂಗಳೂರು ಉಳ್ಳಾಲ ತೀರಕ್ಕೆ ಸನಿಹದಲ್ಲೇ ಈ ವಿದೇಶಿ ಹಡಗು 2022 ಜೂನ್ 20 ರಂದು ಪ್ರತಿಕೂಲ ಹವಾಮಾನ ವೈಪರಿತ್ಯದಿಂದಾಗಿ ಅವಘಡಕ್ಕೀಡಾಗಿ ಅರಬ್ಬೀ ಸಮುದ್ರದಲ್ಲಿ ಮುಳಗಡೆಯಾಗಿತ್ತು, 8,000 ಟನ್ ಉಕ್ಕಿನ ಕಾಯಿಲ್​ ತುಂಬಿಸಿಕೊಂಡು ಚೀನಾದ ಟಿಯಾಂಜಿನ್​ನಿಂದ ಲೆಬನಾನ್​ ದೇಶಕ್ಕೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿತ್ತು.

ಈ ಅವಘಡ ಸಂದರ್ಭ ಹಡಗಿನಲ್ಲಿದ್ದ 15 ಸಿರಿಯಾ ದೇಶದ ನಾವಿಕರನ್ನು ಭಾರತೀಯ ಕೋಸ್ಟ್ ಗಾರ್ಡ್(Indian Coast Gaurd) ಸಹಾಯದಿಂದ ರಕ್ಷಿಸಲಾಗಿತ್ತು. ಇದೀಗ ಹಡಗು ಮುಳುಗಡೆಯಾಗಿ ಸರಿ ಸುಮಾರು 18 ತಿಂಗಳು ಕಳೆದಿದೆ. ಹಡಗಿನ ಅವಶೇಷಗಳಿಂದ ಈ ಭಾಗದ ಮೀನುಗಾರರಿಗೆ ಮೀನುಗಾರಿಕೆ ನಡೆಸಲು ಭಾರಿ ತೊಂದರೆ ಎದುರಾಗುತ್ತಿದ್ದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮೀನಿನ ಬಲೆಗಳು ಹಡಗಿನ ಅವಶೇಷಗಳಿಗೆ ಸಿಲುಕಿ ವ್ಯಾಪಕ ನಷ್ಟ ಅನುಭವಿಸುತ್ತಿದ್ದಾರೆ ಎನ್ನಲಾಗಿದೆ.Bharat Jodo Yatra: ಡಿಸಂಬರಿನಲ್ಲಿ 2 ನೇ ಹಂತದ ಭಾರತ್​ ಜೋಡೋ ಯಾತ್ರೆ

ಇದಕ್ಕು ಮುನ್ನ ಸಂಭಾವ್ಯ ತೈಲ ಮಾಲಿನ್ಯ ನಿಯಂತ್ರಿಸಲು ಮುಳುಗಡೆಯಾಗಿದ್ದ ಹಡಗಿನಿಂದ ಇಂಧನವನ್ನು ಖಾಲಿ ಮಾಡಲಾಗಿತ್ತು.   AIDS HIV: ಏಡ್ಸ್ ರೋಗ​ ಸೋಂಕಿತರಲ್ಲಿ ಕರ್ನಾಟಕ 9ನೇ ಸ್ಥಾನ ! ಏಡ್ಸ್ ಹರಡುವಿಕೆ ಇಳಿಕೆ

 

Leave a Reply

Your email address will not be published. Required fields are marked *