SHOBHA: ಜನಪರ ಆಡಳಿತ ಶೋಭಾ ಕರಂದ್ಲಾಜೆ

SHOBHA Karandlaje  ಕೇಂದ್ರ ಸರ್ಕಾರ ಅಧಿಕಾರಿಕ್ಕೆ ಬಂದಾಗಿನಿಂದ ಜನಪರ ಆಡಳಿತ ನೀಡುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ಯಮಗಳ ಖಾತೆ ಸಹಾಯಕ ಸಚಿವೆ ಕುಮಾರಿ.ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನ್ ಔಷಧಿ ಯೋಜನೆಯಿಂದಾಗಿ ದೇಶದ ಬಡ ಜನರಿಗೆ ಅಗ್ಗದ ದರದಲ್ಲಿ ಔಷಧ ಗಳು ಲಭ್ಯವಾಗುತ್ತಿವೆ. ಜಲ ಜೀವನ ಅಭಿಯಾನದ ಮೂಲಕ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಮುದ್ರಾ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಕಿಸಾನ್ ಸಮ್ಮಾನ್ ನಿಧಿ ಯೋಜನೆಗಳು ಜನಸಾಮಾನ್ಯರಿಗೆ ಸಾಕಷ್ಟು ಅನುಕೂಲ ಕಲ್ಪಿಸಿವೆ ಎಂದು ಸಚಿವೆ ತಿಳಿಸಿದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಮತ್ತಷ್ಟು ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಬಡ ವರ್ಗದ ಏಳ್ಗೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಕೃಷಿ ವಲಯದಲ್ಲಿ ತಂತ್ರಜ್ಞಾನದ ಬಳಕೆ ಮಾಡಲು ಸರ್ಕಾರ ರೈತರಿಗೆ ಉತ್ತೇಜನ ನೀಡುತ್ತಿದೆ. ಡ್ರೋನ್ ಮೂಲಕ ಔಷಧಿ ಸಿಂಪಡಣೆ ಮಾಡುವ ತಂತ್ರಜ್ಞಾನ ಈಗ ಪ್ರಚಲಿತ ಕ್ಕೆ ಬರುತ್ತಿದೆ. ರೈತರು ಅದನ್ನು ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಸಚಿವೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಎಂ.ಕೆ ಪ್ರಾಣೇಶ್, ಕಾಫಿ ಮಂಡಳಿ ಅಧ್ಯಕ್ಷರಾದ ಶ್ರೀ ದಿನೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅಂತರಾಷ್ಟ್ರೀಯ ಬೀಚ್ ಫೆಸ್ಟಿವಲ್ ಗೆ ಸಿದ್ಧವಾದ ಕಾಸರಗೋಡು

Leave a Reply

Your email address will not be published. Required fields are marked *