ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು. ನವೆಂಬರ 24. ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿದರು.

ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.

ನವೆಂಬರ್ 22 ರಂದು ಕಾಶ್ಮೀರದ ರಜೌರಿಯ ಕಾವಿಕೋಟ್ ಎಂಬಲ್ಲಿ ಇಬ್ಬರು ಉಗ್ರರು ಅಡಗಿದ್ದರು.ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು. ಆದರೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದರು.

ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ.ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯ ರಜೌರಿಯಲ್ಲಿ ಬುಧವಾರ ಭಯೋತ್ಪಾದಕರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮರಾದ ನಾಲ್ವರಲ್ಲಿ 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿದ್ದಾರೆ.

Bharat Jodo Yatra: ಡಿಸಂಬರಿನಲ್ಲಿ 2 ನೇ ಹಂತದ ಭಾರತ್​ ಜೋಡೋ ಯಾತ್ರೆ

ಹುತಾತ್ಮ ಕ್ಯಾಪ್ಟನ್ ಎಂವಿ ಪ್ರಾಂಜಲ್ ಒಬ್ಬ ಉತ್ತಮ ಅಭಿರುಚಿಯುಳ್ಳ ಛಾಯಾಗ್ರಾಹಕ, ಅತ್ಯಾಸಕ್ತಿಯ ಟ್ರಾವೆಲರ್, ಹವ್ಯಾಸಿ ಜಾದೂಗಾರ ಮತ್ತು ಸ್ಕೌಟ್ ರೇಂಜರ್ ಆಗಿದ್ದರು. ಪ್ರಾಂಜಲ್ ಅವರು ಭಾರತೀಯ ಸೇನೆಯಿಂದ ತಮ್ಮ ರಜೆಯ ಸಮಯದಲ್ಲಿ ಮಂಗಳೂರಿಗೆ ಭೇಟಿ ನೀಡಿದಾಗ, ಅವರು ಬ್ಯಾಚುಲರ್ ಆಫ್ ಎಜುಕೇಶನ್ (ಬಿಎಡ್) ಪದವೀಧರರಿಗೆ ಭಾರತದ ಧ್ವಜ ಸಂಹಿತೆಯ ಬಗ್ಗೆ ತರಗತಿ ತೆಗೆದುಕೊಳ್ಳುತ್ತಿದ್ದರು, ಇತಿಹಾಸ ಮತ್ತು ಅನುಸರಿಸಬೇಕಾದ ಪ್ರೋಟೋಕಾಲ್‌ಗಳ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು.

ಮಂಗಳೂರಿನಲ್ಲಿ ಸ್ಕೌಟ್ ದಿನಗಳಿಂದ ಪ್ರಾಂಜಲ್ ಅವರ ಮಾರ್ಗದರ್ಶಿ ಮತ್ತು ಶಿಕ್ಷಕರಾದ ಪಿಜಿ ವೆಂಕಟ್ ರಾವ್ ಮಾತನಾಡಿ, ಪ್ರಾಂಜಲ್ ಬದ್ದಿವಂತ ಮತ್ತು ಇತರರಿಗೆ ಯಾವಾಗಲೂ ಸಹಾಯ ಮಾಡಲು ಪ್ರಾಮಾಣಿಕವಾಗಿ ಮುಂದೆ ಬರುತ್ತಿದ್ದರು ಎಂದು ಹೇಳಿದ್ದಾರೆ. ತರಬೇತಿ ದಿನಗಳಲ್ಲಿ ಅವರು ಒಟ್ಟಿಗೆ ಟ್ರೆಕ್ಕಿಂಗ್ ಗೆ ಹೋಗಿದ್ದಾಗಿ ತಿಳಿಸಿದ್ದಾರೆ.

ಅವರ ಪೋಷಕರು ಅತ್ಯಂತ ಧೈರ್ಯಶಾಲಿಗಳು, ಹೀಗಾಗಿ ಧೈರ್ಯಶಾಲಿ ವ್ಯಕ್ತಿಯನ್ನು ಬೆಳೆಸಿದ್ದಾರೆ ಎಂದು ಸ್ಕೌಟ್ ಶಿಕ್ಷಕ ಹೇಳಿದ್ದಾರೆ..

ಒಂದೆರಡು ವರ್ಷಗಳ ಹಿಂದೆ ಬೋನ್ ಮ್ಯಾರೋ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಶಿಕ್ಷಕಿಯೊಬ್ಬರಿಗೆ ದೇಣಿಗೆ ಸಂಗ್ರಹಿಸಿ ಜೀವ ಉಳಿಸಿದ್ದಾರೆ ಕ್ಯಾಪ್ಟನ್. ಪ್ರಾಂಜಲ್ ಅವರ ಅಂತಿಮ ವಿಧಿವಿಧಾನಗಳು ಬೆಂಗಳೂರಿನಲ್ಲಿ ಸಕಲ ಗೌರವಗಳೊಂದಿಗೆ ನಡೆಯಲಿದೆ. ಅವರ ಪಾರ್ಥಿವ ಶರೀರವನ್ನು ಶುಕ್ರವಾರ ನಗರಕ್ಕೆ ತರಲಾಯಿತು.

ಅವರ ಪೋಷಕರು ಅತ್ಯಂತ ಧೈರ್ಯಶಾಲಿಗಳು, ಹೀಗಾಗಿ ಧೈರ್ಯಶಾಲಿ ವ್ಯಕ್ತಿಯನ್ನು ಬೆಳೆಸಿದ್ದಾರೆ ಎಂದು ಸ್ಕೌಟ್ ಶಿಕ್ಷಕ ಹೇಳಿದ್ದಾರೆ. ಮಂಗಳೂರಿನ ಪ್ರಾಂಜಲ್ ಅವರ ಕೊಠಡಿಯನ್ನು ಸ್ಕೌಟ್ ದಿನಗಳಿಂದ ಅವರ ಎಲ್ಲಾ ವಿಶೇಷ ನೆನಪುಗಳಿಂದ ಅಲಂಕರಿಸಲಾಗಿತ್ತು ಅವರ ಎಲ್ಲಾ ಶಿಕ್ಷಕರನ್ನು ಗೌರವಿಸಲಾಯಿತು.

ಎಂಆರ್‌ಪಿಎಲ್‌ ಎಂಡಿ ವೆಕಟೇಶ್ ಪುತ್ರ ಪ್ರಂಜಾಲ್

ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಪ್ರಾಂಜಲ್, ಎಂಆರ್‌ಪಿಎಲ್‌ ಡೆಲ್ಲಿ ಸ್ಕೂಲ್‌ನಲ್ಲಿ ಎಲ್‌ಕೆಜಿಯಿಂದ 10ನೇ ತರಗತಿ ತನಕ ಶಿಕ್ಷಣ ಪಡೆದಿದ್ದರು. ಬಳಿಕ ಮಹೇಶ್‌ ಕಾಲೇಜಿನಲ್ಲಿ ಪಿಯುಸಿ ಪೂರೈಸಿ, ನಂತರ ಮಧ್ಯಪ್ರದೇಶದ ಮಿಲಿಟರಿ ಕಾಲೇಜ್‌ ಆಫ್‌ ಟೆಲಿಕಮ್ಯುನಿಕೇಶನ್‌ ಎಂಜಿನಿಯರಿಂಗ್‌ನಲ್ಲಿ ಶಿಕ್ಷಣ ಪಡೆದು, ನೇರವಾಗಿ ಭಾರತೀಯ ಸೇನೆ ಸೇರಿದ್ದರು.

ಎರಡು ವರ್ಷಗಳ ಹಿಂದೆಯಷ್ಟೇ ಪ್ರಾಂಜಲ್‌ ಅವರ ವಿವಾಹ ನೆರವೇರಿದ್ದು, ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್‌ ಮಾಡುತ್ತಿದ್ದಾರೆ. ಈ ಸುದ್ದಿಯು ಪ್ರಾಂಜಲ್‌ ಕುಟುಂಬ ಹಾಗೂ ಅವರ ಕುಟುಂಬವನ್ನು ದಿಗ್ಭ್ರಮೆಗೊಳಿಸಿದೆ.

Leave a Reply

Your email address will not be published. Required fields are marked *