Sowmya Reddy ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ

Sowmya Reddy

Sowmya Reddy   ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಜೊತೆಗೆ ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿ ಪತ್ರಿಕಾ ಪ್ರಕಟಣೆ ನೀಡಿದೆ.

ಬೆಂಗಳೂರು ಆಗಸ್ಟ್ 13: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಸೌಮ್ಯರೆಡ್ಡಿ (Sowmya Reddy) ಅವರನ್ನು ನೂತನ ಮಹಿಳಾ ಕಾಂಗ್ರೆಸ್(Mahila Congress) ಅಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ.

ಎಐಸಿಸಿಯಿಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಮಾಡಿದೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ.

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 16 ಮತಗಳಿಂದ Sowmya Reddy ಪರಾಭವಗೊಂಡಿದ್ದರು.

ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಕುರಿತಂತೆ ಎಐಸಿಸಿಯ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಧ್ಯಕ್ಷರ ಅನುಮತಿಯ ಮೇರೆಗೆ ಆಂಧ್ರಪ್ರದೇಶದ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಚುಕು ನಾಚಿ ಅವರನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ.

ಇನ್ನೂ ಚಂಡೀಗಡದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಂದಿತಾ ಹೂಡ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ (V)ಅವರನ್ನು ನೇಮಕ ಮಾಡಲಾಗಿರುವುದಾಗಿ ತಿಳಿಸಿದ್ದಾರೆ.

ಸೌಮ್ಯಾ ರೆಡ್ಡಿ ಅವರು ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂ.‌ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ, ತೇಜಸ್ವಿ ಸೂರ್ಯ ವಿರುದ್ಧ ಪರಾಜಿತಗೊಂಡಿದ್ದರು. ಸದ್ಯ ಪುಷ್ಪಾ ಅಮರನಾಥ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು.

Sowmya Reddy  ಎಂಜಿನಿಯರಿಂಗ್ ಪದವಿಧರೆ

41 ವರ್ಷದ ಸೌಮ್ಯ ರೆಡ್ಡಿ ಮಾರ್ಚ್ 18, 1983ರಲ್ಲಿ ಜನಿಸಿದರು. ಬೆಂಗಳೂರಿನ ಆರ್‌.ವಿ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಅಧ್ಯಯನ ಪೂರ್ಣಗೊಳಿಸಿ, ನ್ಯೂಯಾರ್ಕ್‌ನ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್ ಅಧ್ಯಯನವನ್ನು ಸೌಮ್ಯ ರೆಡ್ಡಿ ಪೂರ್ಣಗೊಳಿಸಿದ್ದಾರೆ.

ಜೊತೆಗೆ ತಾವು ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತೆ, ಮಾಜಿ ಶಾಸಕಿಯಾಗಿದ್ದು, ಇದೇ ತಮ್ಮ ಉದ್ಯೋಗ ಎಂದು ಈ ಹಿಂದೆ ಲೋಕಸಭಾ ಚುನಾವಣೆ ನಾಮಪತ್ರ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದರು. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ.

Sowmya Reddy  ಪರಿಸರ ರಕ್ಷಣೆ

ಪರಿಸರವಾದಿಯಾಗಿ, ಅವರು ನೀರಿನ ಸಂರಕ್ಷಣೆ, ಪ್ರತ್ಯೇಕತೆ ಮತ್ತು ಮಿಶ್ರಗೊಬ್ಬರವನ್ನು ಉತ್ತೇಜಿಸುವ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ನಾಗರಿಕರು, ನಿವಾಸಿ ಕಲ್ಯಾಣ ಸಂಘಗಳು, ಬಿಬಿಎಂಪಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುವ ಮೂಲಕ ಕರ್ನಾಟಕದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಖಚಿತಪಡಿಸಿಕೊಳ್ಳುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

Sowmya Reddy   ಮಹಿಳಾ ಸಬಲೀಕರಣ

Sowmya Reddy

ಸ್ವತಃ ಮಹಿಳಾ ಉದ್ಯಮಿಯಾಗಿರುವ ಸೌಮ್ಯಾ ಅವರು ಭಾರತದಲ್ಲಿ ಮಹಿಳೆಯರು ಎದುರಿಸುತ್ತಿರುವ ತಾರತಮ್ಯವನ್ನು ಅರ್ಥಮಾಡಿಕೊಂಡಿದ್ದಾರೆ. ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಪ್ರಾರಂಭಿಸಲು ಕೌಶಲ್ಯ ತರಬೇತಿ, ಉದ್ಯೋಗಗಳು ಮತ್ತು ಸರ್ಕಾರಿ ಸಾಲಗಳನ್ನು ಒದಗಿಸುವ ಮೂಲಕ ಮಹಿಳೆಯರಿಗೆ ಪ್ರತಿ ಕ್ಷೇತ್ರದಲ್ಲೂ ಬೆಳೆಯಲು ಅವರನ್ನು ಸಬಲೀಕರಣಗೊಳಿಸಲು ಅವರು ಬಯಸುತ್ತಾರೆ.

Sowmya Reddy   ರಾಜಕೀಯ ಸಿದ್ಧಾಂತ

ಪ್ರಜಾಪ್ರಭುತ್ವವು “ಜನರಿಂದ, ಜನರಿಂದ ಮತ್ತು ಜನರಿಗಾಗಿ” ಎಂದು ಸೌಮ್ಯಾ ಬಲವಾಗಿ ನಂಬುತ್ತಾರೆ. ಜನರು ಮತ್ತು ಶಾಸಕರ ನಡುವೆ ಸಮರ್ಥ ಪ್ರತಿಕ್ರಿಯೆ ವ್ಯವಸ್ಥೆಯನ್ನು ರಚಿಸಲು ಅವರು ಬಯಸುತ್ತಾರೆ ಆದ್ದರಿಂದ ಜನರ ಧ್ವನಿಯನ್ನು ಕೇಳಲಾಗುತ್ತದೆ.

NIT-K JoSAA 2024 ಜೋಸಾ (JoSAA) ಕೌನ್ಸೆಲಿಂಗ್ ಪ್ರಕ್ರಿಯೆ ಜೂ.10 ರಿಂದ ಪ್ರಾರಂಭ

Leave a Reply

Your email address will not be published. Required fields are marked *