ಅರಣ್ಯದಲ್ಲಿಯೇ  ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು ಲಭಿಸುವಂತೆ ಕ್ರಮ : ಅರಣ್ಯ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

Cm presents medal forForest officials

ಮಾನವ- ವನ್ಯಮೃಗಗಳ ಸಂಘರ್ಷಗಳನ್ನು ತಡೆಯುವ ಕೆಲಸವಾಗಬೇಕು

ಬೆಂಗಳೂರು, ಸೆಪ್ಟೆಂಬರ್ 29 :

ಮಾನವ- ವನ್ಯಮೃಗಗಳ ಸಂಘರ್ಷಗಳನ್ನು ತಡೆಯುವ ಕೆಲಸವಾಗಬೇಕು. ಅರಣ್ಯ ಪ್ರದೇಶಗಳಿಂದ ಪ್ರಾಣಿಗಳು ಬಾರದಂತೆ ಬ್ಯಾರಿಕೇಡ್ ನಿರ್ಮಿಸಲು ಹೆಚ್ಚಿನ  ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಕಾಡು ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು ಅರಣ್ಯ ಪ್ರದೇಶದೊಳಗೆ ಲಭ್ಯವಾಗಿಸುವುದು ಅರಣ್ಯ ಇಲಾಖೆಯ ಜವಾಬ್ದಾರಿಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಕರ್ನಾಟಕ  ಅರಣ್ಯ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿರುವ “ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಜನತಾ ದರ್ಶನದಲ್ಲಿ ಸಂಜೆ 6.30 ರವರೆಗೆ 6,684 ದೂರುಗಳು ಸ್ವೀಕಾರ

ಹೆಚ್ಚಿನ ಸಸಿಗಳನ್ನು ನೆಡುವ ಮೂಲಕ ಕಾಡು ಬೆಳೆಸುವ ಕೆಲಸವಾಗಬೇಕು. ಅರಣ್ಯ ಪ್ರದೇಶದ ವಿಸ್ತೀರ್ಣಗೊಂಡರೆ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ. ಕಾಡುಗಳಲ್ಲಿ ಹುಲಿ, ಆನೆಗಳ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿರುವುದು ಸಂತೋಷದ ವಿಷಯ. ಆದರೆ ಕಾಡುಪ್ರಾಣಿಗಳು ಜನರಿರುವ ಪ್ರದೇಶಕ್ಕೆ ಬರುತ್ತಿದ್ದು, ಅರಣ್ಯ ಇಲಾಖೆಯವರು ಹಾಗೂ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

ಅರಣ್ಯ ಪ್ರದೇಶ ಹೆಚ್ಚಳದಿಂದ ಹವಾಮಾನ ವೈಪರೀತ್ಯಗಳನ್ನು ತಡೆಯಬಹುದು

ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳನ್ನು ಪ್ರೋತ್ಸಾಹಿಸುವುದು ಸರ್ಕಾರದ ಜವಾಬ್ದಾರಿ. ಅರಣ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ರಾಜ್ಯದ ಭೂ ಪ್ರದೇಶದಲ್ಲಿ ಶೇ. 20 ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು, ಕನಿಷ್ಠ ಶೇ. 33 ಕ್ಕೆ ಅರಣ್ಯ ಪ್ರದೇಶದ ವಿಸ್ತರಣೆಯಾಗಬೇಕಿದೆ. ಆಗಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯ. ಈ ವರ್ಷ ಮಳೆಯಿಲ್ಲದೇ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಕಾವೇರಿ ನೀರು , ಬರಗಾಲ, ಆಹಾರ ಉತ್ಪತ್ತಿ ಕೊರತೆಗಳನ್ನು ತಲೆದೋರುತ್ತದೆ. ಈ ಪರಿಸ್ಥಿತಿ ರಾಜ್ಯದ ಜಿಡಿಪಿ, ತಲಾವಾರು ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಾರಿ 40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇ. 50 ರಷ್ಟು ಬೆಳೆ ಹಾನಿಯಾಗಿದೆ. ಪ್ರತಿ ನಾಲ್ಕೈದು ವರ್ಷಕ್ಕೊಮ್ಮೆ ಇಂತಹ ಬರಗಾಲ ಪರಿಸ್ಥಿತಿ ಎದುರಾಗುತ್ತಿದ್ದು, ಅರಣ್ಯ ಪ್ರದೇಶ ಹೆಚ್ಚಿದರೆ ಹವಾಮಾನ ವೈಪರೀತ್ಯಗಳನ್ನು ತಡೆಗಟ್ಟಲು ಸಾಧ್ಯವಿದೆ ಎಂದರು.

ಪ್ರತಿ ವರ್ಷವೂ ಮುಖ್ಯಮಂತ್ರಿಗಳ ಪದಕ ಪ್ರದಾನ :

ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರು ಅತ್ಯಂತ ಕ್ಲಿಷ್ಟ ಪರಿಸ್ಥಿತಿ ಯಲ್ಲಿ ಕಾರ್ಯನಿರ್ವಹಿಸುತ್ತಾ ಅರಣ್ಯ ಸಂರಕ್ಷಣೆ ಮಾಡುತ್ತಾರೆ. ವನ್ಯಜೀವಿಗಳನ್ನು ರಕ್ಷಣೆ  ಮಾಡುವುದಲ್ಲದೆ ಕಾಡು ಬೆಳೆಸುವ ಕೆಲಸವನ್ನೂ ಮಾಡುತ್ತಾರೆ. ಅಸಾಧಾರಣ ಸೇವೆ ಮಾಡಿದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಉತ್ತೇಜಿಸುವ ಕೆಲಸವನ್ನು  2017 ರಿಂದ  ಮಾಡಲಾಗುತ್ತಿದೆ. 2017, 2018, 2019 ರಲ್ಲಿ ನೀಡಲಾಗಿದೆ. ಎರಡು ವರ್ಷಗಳಿಂದ ಪದಕ ವಿತರಣಾ ಸಮಾರಂಭ ನಡೆದಿರಲಿಲ್ಲ. 2020 ಹಾಗೂ 21 ನೇ ಸಾಲಿನ ಪದಕ ವಿತರಣೆಯನ್ನು ಅರಣ್ಯ ಇಲಾಖೆ ವತಿಯಿಂದ 50 ಪದಕಗಳನ್ನು ವಿತರಣೆ ಮಾಡಿದೆ. 2- 3 ವರ್ಷಗಳ ಪದಕಗಳನ್ನು ಒಟ್ಟಿಗೆ ನೀಡುವ ಪರಿಪಾಠ ಇರಬಾರದು .ಪ್ರಶಸ್ತಿ ವಿಜೇತರ ಆಯ್ಕೆಯ ನಂತರ ಎರಡು ಮೂರು ವರ್ಷ ಕಾಯುವ ಅಗತ್ಯವಿಲ್ಲ. ಪ್ರತಿ ವರ್ಷವೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಬೇಕೆಂದು ಅರಣ್ಯ ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಚಿವ  ಪ್ರಿಯಾಂಕ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅ ಖ್ತರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ , ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಗೆ ಮರುಪರಿಶೀಲನಾ ಅರ್ಜಿ

ಬೆಂಗಳೂರು, ಸೆಪ್ಟೆಂಬರ್ 29: ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ  ನಾಳೆಯೇ ನಮ್ಮ ಬಳಿ  ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು  ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ನಡೆದ ಸಭೆಯ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರನ್ನು, ಸಂಘ ಸಂಸ್ಥೆಗಳಿಗೆ, ಅಭಿನಂದಿಸಿದ ಮುಖ್ಯಮಂತ್ರಿಗಳು ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಅಧಿಕಾರಿಗಳನ್ನು ಕೂಡ  ಅಭಿನಂದಿಸಿದರು.

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್  ಗಳು ಸಭೆಯಲ್ಲಿ ಭಾಗವಹಿಸಿದ್ದರು. ಅವರ ಅನುಭವದ ಆಧಾರದ ಮೇಲೆ ಕೆಲವು ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆಗಳನ್ನು ಪರಿಗಣಿಸಿ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಪರಿಣಿತರ ಸಲಹಾ ಸಮಿತಿ

ಮುಖ್ಯವಾಗಿ ರಾಜ್ಯದ ನೀರಾವರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪರಿಣಿತರ ಸಲಹಾ ಸಮಿತಿಯನ್ನು ರಚಿಸಿ, ಡಾಟಾ ಸಂಗ್ರಹ , ಸಲಹೆ ನೀಡುವ ಕಾರ್ಯವನ್ನು ಮಾಡಬೇಕು. ಅಂತರರಾಜ್ಯ ಜಲವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ ಸೂಚನೆ, ಕಾನೂನು ತಂಡಕ್ಕೆ ಮಾಹಿತಿ ನೀಡಲು ಕೂಡ ಸಮಿತಿ ಅಗತ್ಯ ಎನ್ನುವ ಸಲಹೆ ಬಂದಿದೆ. ಇದರಂತೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.

ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ  ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3000 ಕ್ಯೂಸೆಕ್ ನೀಡಲು ಸೂಚಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ  ಸೂಚಿಸಿದ್ದಾರೆ ಎಂದರು.

ಮೇಕೆದಾಟು ಯೋಜನೆಗೆ ತೀವ್ರವಾಗಿ ಒತ್ತಾಯ

ಮೇಕೆದಾಟು ಯೋಜನೆಯ  ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಹಾಗಾಗಿ ತೀವ್ರವಾಗಿ ಇದನ್ನು ಮಂಡಿಸಬೇಕು ಎಂದು ಸಲಹೆ ನೀಡಿದ್ದಾರೆ. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ  ಕುಡಿಯುವ ನೀರಿಗೆ ಅದನ್ನು ಬಳಸಲಾಗುವುದು. ಸಂಕಷ್ಟ ಬಂದಾಗ ತಮಿಳುನಾಡಿಗೆ ನೀರು ಬಿಡಬಹುದು ಎಂದು ಸಲಹೆ ನೀಡಿದ್ದಾರೆ ಎಂದರು.

ಸಂದರ್ಭ ಬಂದರೆ ವಿಶೇಷ ಅಧಿವೇಶ ಕರೆಯಲಾಗುವುದು. ಉದ್ದೇಶಪೂರ್ವಕವಾಗಿ ಆದೇಶ ಪಾಲನೆಯಾಗದಿದ್ದಾಗ ಮಾತ್ರ ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರತಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೃಷಿ ಸಚಿವ ಚೆಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕಾನೂನು ಸಲಹೆಗಾರರಾದ ಪೊನ್ನಣ್ಣ  ಉಪಸ್ಥಿತರಿದ್ದರು.

Rape: 8 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನಿಂದ ಅತ್ಯಾಚಾರ

Leave a Reply

Your email address will not be published. Required fields are marked *