Yediyurappa ಬಿಎಸ್‌ ಯಡಿಯೂರಪ್ಪ CID ವಿಚಾರಣೆ

Yediyurappa  ಬೆಂಗಳೂರು, ಏಪ್ರಿಲ್ 12 (www.kannadadhvani.com ): ಕೆಲವು ಸಮಯದ ಹಿಂದೆ ಬಾಲಕಿ ಮೇಲೆ ಲೈಂಗಿಕ  ( Sexual assault )ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ (Yediyurappa ) ಅವರನ್ನು ಶುಕ್ರವಾರ ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು, ಅವರ ‘ಧ್ವನಿ’ Sound Sample ಮಾದರಿಯನ್ನು ಸಂಗ್ರಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯಿದೆ ಅಡಿಯಲ್ಲಿ ಮಾರ್ಚ್ ತಿಂಗಳಲ್ಲಿ ಪ್ರಕರಣ ದಾಖಲಾಗಿದೆ.

ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿ ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಆರೋಪಿ ಯಡಿಯೂರಪ್ಪ ಬೆಂಗಳೂರಿನ ಸಿಐಡಿ ಕಚೇರಿಗೆ ಆಗಮಿಸಿದ್ದರು. ಸುಮಾರು ಒಂದು ಗಂಟೆ ಕಾಲ ತನಿಖಾಧಿಕಾರಿ ಮುಂದೆ ಹಾಜರಾಗಿದ್ದರು.

ಯಡಿಯೂರಪ್ಪ ವಿರುದ್ಧ  ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ಆಕ್ಷೇಪಿಸಿದೆ ಎಂದು ಹೇಳಿರುವ ಸಂತ್ರಸ್ತೆಯ ತಾಯಿ  ಈ ನಿಟ್ಟಿನಲ್ಲಿ ಆಧಾರವಾಗಿ ವಿಡಿಯೋವೊಂದನ್ನು ತನಿಖಾಧಿಕಾರಿಗಳಿಗೆ ನೀಡಿದ್ದಾರೆ. ಈ ವಿಡಿಯೋದಲ್ಲಿ ಘಟನೆ ಕುರಿತು ಬಿಎಸ್‌ವೈ ಹಾಗೂ ಮಹಿಳೆ ನಡುವೆ ಮಾತುಕತೆ ನಡೆದಿದೆ. ಈ ಮಾತುಕತೆ ಬಿಎಸ್‌ವೈ ಅವರದ್ದೆ ಎಂದು ಖಚಿತ ಮಾಡಬೇಕಾಗಿದೆ

FSL ಎಫ್‌ಎಸ್‌ಎಲ್‌ಗೆ ಧ್ವನಿ ಮಾದರಿ

” ವಿಡಿಯೋದಲ್ಲಿ ಬಿಎಸ್‌ವೈ ಸಂಭಾಷಣೆ ಖಚಿತಪಡಬೇಕಿದೆ. ಈ ನಿಟ್ಟಿನಲ್ಲಿ ಅವರ ಧ್ವನಿ ಮಾದರಿ ಸಂಗ್ರಹಿಸಲಾಗಿದೆ. ಈ ಮಾದರಿಯನ್ನು ಫಾರೆನ್ಸಿಕ್ ಸ್ಟ್ Forensic  Test ಗಾಗಿ FSL ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುವುದು. ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹೇಳಿಕೆ ದಾಖಲಿಸಿಲ್ಲ. ಅಗತ್ಯಬಿದ್ದರೆ ಮತ್ತೊಮ್ಮೆ ವಿಚಾರಣೆಗೆ ಕರೆಸಲಾಗುವುದು,” ಎಂದು ಸಿಐಡಿ ಉನ್ನತ ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?

ಸಹಾಯ ಯಾಚಿಸಿ ಮನೆಗೆ ತೆರಳಿದ್ದ ವೇಳೆ 17 ವರ್ಷದ ಅಪ್ರಾಪ್ತೆಗೆ ಬಿ.ಎಸ್‌. ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ಸಿಐಡಿ ತನಿಖೆ ಸಮರ್ಪಕವಾಗಿಲ್ಲ. ಆರೋಪಿಗೆ ಅನುಕೂಲವಾಗುವಂತೆ ತನಿಖೆ ನಡೆಯುತ್ತಿದೆ. ಹೀಗಾಗಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಂತ್ರಸ್ತೆ ತಾಯಿ ಇತ್ತೀಚೆಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು.

ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಅವರ ಸಹಾಯ ಪಡೆಯಲು 2024 ಫೆಬ್ರವರಿ 2ರಂದು ತಮ್ಮ ಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಆಗ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ಅವರು ಹೇಳಿದ್ದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂಬ ಗಂಭೀರ ಆರೋಪ ಮಾಡಿರುವ ಸಂತ್ರಸ್ತ ಬಾಲಕಿಯ ತಾಯಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ಪೋಕ್ಸೊ ಪ್ರಕರಣದಲ್ಲಿ ತನಿಖಾ ಪ್ರಕ್ರಿಯೆಗಳನ್ನು ಅನುಸರಿಸದೆ ವಿಳಂಬ ಮಾಡುತ್ತಿದ್ದಾರೆ. ಜತೆಗೆ, ಅನಗತ್ಯವಾಗಿ ಕೇಸ್‌ಗೆ ಸಂಬಂಧಪಡದ ವ್ಯಕ್ತಿಗಳನ್ನು ವಿಚಾರಣೆಗೆ ಕರೆಸಿ ಕಾಲಹರಣ ಮಾಡುತ್ತಿದ್ದಾರೆ. ಈ ಮೂಲಕ ಪ್ರಭಾವಿ ಆರೋಪಿ ರಕ್ಷಣೆಗೆ ಬೇಕಾದ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ನ್ಯಾಯಕ್ಕಾಗಿ ಹೋರಾಡುತ್ತಿರುವ ನನಗೆ, ರಾಜ್ಯ ಸರಕಾರ, ಸಿಐಡಿ ಮೇಲೆ ನಂಬಿಕೆ ಇಲ್ಲ. ಈ ನಿಟ್ಟಿನಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ನಿವೃತ್ತ ನ್ಯಾಯಮೂರ್ತಿಯೊಬ್ಬರ ಮೇಲ್ವಿಚಾರಣೆಗೆ ವಹಿಸಬೇಕು,” ಎಂದು ಸಂತ್ರಸ್ತೆ ತಾಯಿ ಮನವಿಯಲ್ಲಿ ಕೋರಿದ್ದಾರೆ. ಈ ಮನವಿಯನ್ನು ಏಪ್ರಿಲ್ 2ರಂದು  ಹೈಕೋರ್ಟ್‌ ಸ್ವೀಕರಿಸಿದೆ.

ಮಹಿಳೆ ನೀಡಿದ ದೂರಿನ ಅನ್ವಯ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012ರ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354ಎ ಅಡಿ ಪ್ರಕರಣ ದಾಖಲಿಸಲಾಗಿತ್ತು. ಯಡಿಯೂರಪ್ಪ ಅವರನ್ನು ಮತ್ತೆ ಭೇಟಿ ಮಾಡಿದ ಸಂದರ್ಭದ ವಿಡಿಯೋವನ್ನು ಮಹಿಳೆ ಹಂಚಿಕೊಂಡಿದ್ದರು.

Leave a Reply

Your email address will not be published. Required fields are marked *